Home News Shivamogga: 12 ಗುಂಟೆ ಅರಣ್ಯ ಒತ್ತುವರಿ ಮಾಡಿದ ವ್ಯಕ್ತಿಗೆ ಒಂದು ವರ್ಷ ಜೈಲು ಶಿಕ್ಷೆ !!

Shivamogga: 12 ಗುಂಟೆ ಅರಣ್ಯ ಒತ್ತುವರಿ ಮಾಡಿದ ವ್ಯಕ್ತಿಗೆ ಒಂದು ವರ್ಷ ಜೈಲು ಶಿಕ್ಷೆ !!

Hindu neighbor gifts plot of land

Hindu neighbour gifts land to Muslim journalist

Shivamogga : ಮೀಸಲು ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿ ಒಬ್ಬರಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ ಐದು ಸಾವಿರದಂಡವನ್ನು ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಮೀಸಲು ಅರಣ್ಯ ಪ್ರದೇಶದ ಒತ್ತುವರಿ ಮಾಡಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಣಸವಳ್ಳಿ ಗ್ರಾಮದ ಹೆಚ್.ಡಿ. ಉಮೇಶ್(43) ಅವರಿಗೆ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯ ಒಂದು ವರ್ಷ ಸಾದಾ ಜೈಲು ಶಿಕ್ಷೆ 5 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಹುಣಸವಳ್ಳಿ ಗ್ರಾಮದ ಸರ್ವೆ ನಂಬರ್ 13ರಲ್ಲಿ ಉಮೇಶ್ 12 ಗುಂಟೆ ಅರಣ್ಯ ಪ್ರದೇಶ ಒತ್ತುವರಿ ಮಾಡಿದ ಕುರಿತಂತೆ ತೀರ್ಥಹಳ್ಳಿ ವಲಯ ಅರಣ್ಯ ಅಧಿಕಾರಿ 2019 ರಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದರು. ವಿಶೇಷ ನ್ಯಾಯಾಲಯದ ನ್ಯಾಯಿಕ ಸದಸ್ಯರಾದ ಪಾಟೀಲ ನಾಗಲಿಂಗನಗೌಡ, ಕಂದಾಯ ಸದಸ್ಯ ಕೆ.ಹೆಚ್. ಅಶ್ವತ್ಥ್ ನಾರಾಯಣಗೌಡ ನೇತೃತ್ವದ ಪೀಠ ವಿಚಾರಣೆ ನಡೆಸಿ ಮಾರ್ಚ್ 3ರಂದು ತೀರ್ಪು ನೀಡಿದೆ.