ಮಂಗಳೂರು: ಬೀಚ್ನಲ್ಲಿ ಜೋಡಿಗೆ ಕಿರುಕುಳ ಆರೋಪ; ಯುವಕ ಆತ್ಮಹತ್ಯೆ
ಮಂಗಳೂರು: ಬೀಚ್ನಲ್ಲಿ ಪ್ರೇಮಿಗಳ ಜೋಡಿಗೆ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಯುವಕನೋರ್ವ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ತನ್ನ ನಿವಾಸದಲ್ಲಿ ಮಂಗಳವಾರ ಆತ್ಮಹತ್ಯೆ ಮಾಡಿದ್ದಾನೆ.
Sponsoredಅ.25ರಂದು ಬೀಚ್ನಲ್ಲಿ ಜೋಡಿಯೊಂದಕ್ಕೆ ಕಿರುಕುಳ ನೀಡಿದ ಆರೋಪದಡಿ ಯುವಕ ಸೇರಿ ಹಲವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ, ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಮಂಗಳವಾರ ಬೆಳಗ್ಗೆ ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿದ್ದಾನೆ. ಸ್ಥಳದಲ್ಲಿ ಡೆತ್ನೋಟ್ ಪತ್ತೆಯಾಗಿದ್ದು, ತನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಬರೆದಿರುವುದಾಗಿ ವರದಿಯಾಗಿದೆ.
ಈ ಕುರಿತು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿರುವ ಸುರತ್ಕಲ್ ಪೊಲೀಸ್ ತನಿಖೆ ಮುಂದುವರಿಸಿದ್ದಾರೆ.




