ಭಾನುವಾರ, 8 ನವೆಂಬರ್ 2026

ಮಂಗಳೂರು ಕಂಬಳ: 8.69 ಸೆಕೆಂಡಿನಲ್ಲಿ 100 ಮೀಟರ್‌ ಓಡಿದ ಕಂಬಳ ಓಟಗಾರ

Advertisement
Advertisement

ಮಂಗಳೂರು: ಕಂಬಳದ ಓಟಗಾರ ಮಿಜಾರು ಅಶ್ವತ್ಥಪುರ ಶ್ರೀನಿವಾಸ ಗೌಡ ನೂರು ಮೀಟರ್‌ ಓಟವನ್ನು 8.76 ಸೆಕೆಂಡಿನಲ್ಲಿ ಪೂರೈಸಿದ್ದಾರೆ. ಕಂಬಳ ಓಟದಲ್ಲಿ ಶ್ರೀನಿವಾಸ ಗೌಡರ ದಾಖಲೆಯಲ್ಲಿ ಮೀರಿಸಿದ ಹೊಸ ದಾಖಲೆ ಮಂಗಳೂರಿನಲ್ಲಿ ನಡೆದಿದೆ.

Sponsored

ಮಂಗಳೂರಿನ ಕೂಳೂರಿನಲ್ಲಿ ನಡೆದ ರಾಮ ಲಕ್ಷ್ಮಣ ಕಂಬಳದ ನೇಗಿಲು ಹಿರಿಯ ವಿಭಾಗದ ಫೈನಲ್‌ ಸ್ಪರ್ಧೆಯಲ್ಲಿ 80 ಬಡಗಬೆಟ್ಟು ಶ್ರೀಕ ಸಂದೀಪ್‌ ಶೆಟ್ಟಿ ಅವರ ಕೋಣಗಳು 125 ಮೀಟರ್‌ ಉದ್ದದ ಕೆರೆಯನ್ನು 10.87 ಸೆಕೆಂಡುಗಳಲ್ಲಿ ಕ್ರಮಿಸಿ ನೂತನ ದಾಖಲೆ ಮಾಡಿದೆ. ಈ ಕೋಣಗಳನ್ನು ಕುಂದ ಬಾರಂದಾಡಿ ಮಾಸ್ತಿಕಟ್ಟೆ ಸ್ವರೂಪ್‌ ಕುಮಾರ್‌ ಓಡಿಸಿದ್ದು ಹೊಸ ದಾಖಲೆ ಮಾಡಿದ್ದಾರೆ. ನೂರು ಮೀಟರ್‌ ಓಟವನ್ನು ಕೇವಲ 8.69 ಸೆಕೆಂಡಿನಲ್ಲಿ ಓಡಿ ಶ್ರೀನಿವಾಸ ಗೌಡರು ಸಾಧನೆ ಮಾಡಿದ್ದಾರೆ. ಇದೊಂದು ಹೊಸ ಹೊಸ ಇತಿಹಾಸ ಎನ್ನಬಹುದು.

Advertisement
Advertisement

ಮಂಗಳೂರು ಕಂಬಳ ಫಲಿತಾಂಶ
ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : 141 ಜತೆ
ಅಡ್ಡ ಹಲಗೆ – ಪ್ರಥಮ: ಇರುವೈಲು ದೊಡ್ಡಗುತ್ತು ಜಗದೀಶ್ ಎಂ ಶೆಟ್ಟಿ “ಎ” (11.68) ಹಲಗೆ ಮುಟ್ಟಿದವರು- ತೆಕ್ಕಟ್ಟೆ ಸುಧೀರ್ ದೇವಾಡಿಗ
ದ್ವಿತೀಯ: ನಾರ್ಯಗುತ್ತು ಕುವೆತ್ತಬೈಲು ಸಂತೋಷ್ ರೈ ಬೊಳ್ಳಾರು (11.83) ಹಲಗೆ ಮುಟ್ಟಿದವರು- ಬೈಂದೂರು ಮಹೇಶ್ ಪೂಜಾರಿ

Advertisement

ಹಗ್ಗ ಹಿರಿಯ – ಪ್ರಥಮ: ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ (11.41)
ಓಡಿಸಿದವರು: ಕಕ್ಕೆಪದವು ಪೆಂರ್ಗಾಲು ಕೃತಿಕ್ ಗೌಡ
ದ್ವಿತೀಯ: ನಲ್ಲೂರು ಬಜಗೋಳಿ ಶಿವಪ್ರಸಾದ್ ನಿಲಯ ಪ್ರಾಣೇಶ್ ದಿನೇಶ್ ಭಂಡಾರಿ “ಎ” (11.50) ಓಡಿಸಿದವರು: ಬೈಂದೂರು ವಿಶ್ವನಾಥ ದೇವಾಡಿಗ

ಹಗ್ಗ ಕಿರಿಯ- ಪ್ರಥಮ: ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ ಶೆಟ್ಟಿ “ಬಿ” (11.41) ಓಡಿಸಿದವರು: ಮಂಗಲ್ಪಾಡಿ ರಕ್ಷಿತ್ ಶೆಟ್ಟಿ
ದ್ವಿತೀಯ: ಎರ್ಮಾಳ್‌ ಡಾ.ಚಿಂತನ್ ರೋಹಿತ್ ಹೆಗ್ಡೆ (11.62), ಓಡಿಸಿದವರು: ಮಿಜಾರ್ ಅಶ್ವಥಪುರ ಶ್ರೀನಿವಾಸ ಗೌಡ

ನೇಗಿಲು ಹಿರಿಯ – ಪ್ರಥಮ: ಎಂಬತ್ತು ಬಡಗಬೆಟ್ಟು ಕಲ್ಲಪಾಪು ಶ್ರೀಕ ಸಂದೀಪ್ ಶೆಟ್ಟಿ (10.87)
ಓಡಿಸಿದವರು: ಕುಂದ ಬಾರಂದಡಿ ಮಾಸ್ತಿಕಟ್ಟೆ ಸ್ವರೂಪ್
ದ್ವಿತೀಯ: ಮಂಗಳೂರು ಮರಕಡ ಬಾಯಾಡಿ ಮನೆ ಶಾಂತ ಸಂಜಯ್ ಶೆಟ್ಟಿ “ಎ” (11.44)
ಓಡಿಸಿದವರು: ಬಜಗೋಳಿ ಜೋಗಿಬೆಟ್ಟು ನಿಶಾಂತ್ ಶೆಟ್ಟಿ

ನೇಗಿಲು ಕಿರಿಯ ಪ್ರಥಮ: ಎರ್ಮಾಳ್ ಪುಸ್ಕೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ “ಬಿ” (11.56)ಓಡಿಸಿದವರು: ಕಾವೂರುದೋಟ ಸುದರ್ಶನ್
ದ್ವಿತೀಯ: ಮುಲ್ಕಿ ಚಿತ್ರಾಪು ಸಾನದಮನೆ ಅಂಬಿಕಾ ರವೀಂದ್ರ ಪೂಜಾರಿ (11.74), ಓಡಿಸಿದವರು: ಬಾರಾಡಿ ನತೀಶ್ ಸಫಲಿ

Advertisement
Advertisement