

Mangalore: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಬಿರುಸುಪಡೆದುಕೊಂಡಿರುವ ಕಾರಣ ವಿಪತ್ತು ನಿರ್ವಹಣೆಗೆ ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣಾ ದಳಗಳು ಜಿಲ್ಲೆಗೆ ಬರಲಿದ್ದಾರೆ ಎಂದು ಪ್ರಭಾರ ಜಿಲ್ಲಾಧಿಕಾರಿ ಡಾ.ಕೆ.ಆನಂದ್ ತಿಳಿಸಿದ್ದಾರೆ. ರಾಜ್ಯ ವಿಪತ್ತು ದಳದ ಎರಡು ತಂಡಗಳನ್ನು ಮಂಗಳೂರು ಹಾಗೂ ಸುಬ್ರಹ್ಮಣ್ಯದಲ್ಲಿ ಇರಿಸಲಾಗಿದೆ ಎಂದು ಇಂದು ನಡೆದ ಸಭೆಯಲ್ಲಿ ತಿಳಿಸಿದ್ದಾರೆ.
ಎಸ್‌ಡಿಆರ್‌ಎಫ್ ತಂಡ ಈಗಾಗಲೇ ಆಗಮಿಸಿದೆ ಎಂದು ಅವರು ಹೇಳಿದರು. ಯಾವುದೇ ಪ್ರಾಕೃತಿಕ ದುರಂತಗಳು ಸಂಭವಿಸಿದರೆ ಈ ದಳಗಳು ತಕ್ಷಣವೇ ಸ್ಪಂದಿಸಬೇಕು. ಜೀವ ಹಾನಿಯನ್ನು ತಪ್ಪಿಸುವಂತೆ ನೋಡಬೇಕು. ಮೆಸ್ಕಾಂ, ಅರಣ್ಯ ಸೇರಿದಂತೆ ಸಂಬಂಧಿಸಿದಂತೆ ಇಲಾಖೆಗಳು ತುರ್ತು ಸ್ಪಂದಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.













