ಶನಿವಾರ, 24 ಅಕ್ಟೋಬರ್ 2026

ಮಂಗಳೂರು: ಸಾಂಬಾರಿನಲ್ಲಿ ಜಿರಳೆ ಪತ್ತೆ – ತೊಕ್ಕೊಟ್ಟುವಿನ ಹೋಟೆಲ್‌ಗೆ ಆಹಾರ ಸುರಕ್ಷತಾ ಅಧಿಕಾರಿಗಳ ಖೆ ದಾಳಿ

ತೊಕ್ಕೊಟ್ಟುವಿನ ಹೋಟೆಲೊಂದರ ಊಟದ ಸಾಂಬಾರಿನಲ್ಲಿ ಜಿರಳೆ ಬಿದ್ದಿದೆ ಎಂದು ಗ್ರಾಹಕರೊಬ್ಬರು ನೀಡಿದ ದೂರಿನನ್ವಯ ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತಾ ಅಂಕಿತ ಅಧಿಕಾರಿ ಡಾ.ಪ್ರವೀಣ್ ಕುಮಾರ್ ಅವರು ದಿಢೀರ್ ದಾಳಿ ನಡೆಸಿ ಅಡುಗೆ ಕೋಣೆಯನ್ನು ತಪಾಸಣೆ ನಡೆಸಿದ್ದಾರೆ.

ಅಡುಗೆ ಕೋಣೆಯಲ್ಲಿ ಅಶುಚಿತ್ವ ಕಂಡುಬಂದ ಹಿನ್ನೆಲೆಯಲ್ಲಿ ಹೋಟೆಲ್ ಮಾಲೀಕರಿಗೆ ನೋಟಿಸ್ ಜಾರಿಗೊಳಿಸಲಾಗಿದ್ದು, ಹೆಚ್ಚುವರಿ ಜಿಲ್ಲಾಧಿಕಾರಿ (ADC) ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸುವುದಾಗಿ ಅಧಿಕಾರಿಗಳು ಎಚ್ಚರಿಸಿದ್ದಾರೆ. 

ಹೋಟೆಲ್‌ನ ಅಡುಗೆ ಕೋಣೆಯಲ್ಲಿ ಆಹಾರ ದಾಸ್ತಾನು ಮಾಡಲು ಪ್ರತ್ಯೇಕ ಕೊಠಡಿಯಿರಲಿಲ್ಲ. ಬದಲಾಗಿ ಎಲ್ಲೆಂದರಲ್ಲಿ ಆಹಾರ ಪದಾರ್ಥಗಳನ್ನು ರಾಶಿ ಹಾಕಲಾಗಿತ್ತು. ಪ್ರಸ್ತುತ ಎಲ್ಲವನ್ನೂ ತೆರವುಗೊಳಿಸಿ ಶುಚಿತ್ವ ಕಾಪಾಡಲು ನಿರ್ದೇಶನ ನೀಡಲಾಗಿದೆ.”ಆಹಾರ ಪದಾರ್ಥಗಳನ್ನು ಸುರಕ್ಷಿತವಾಗಿ ಮತ್ತು ಪ್ರತ್ಯೇಕವಾಗಿ ಜೋಡಿಸಿಡುವಂತೆ ಹೋಟೆಲ್ ಮಾಲೀಕರಿಗೆ ಸೂಚನೆ ನೀಡಲಾಗಿದ್ದು, ಸಾರ್ವಜನಿಕ ಆರೋಗ್ಯದ ಜೊತೆ ಆಟವಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ತಿಳಿಸಿದೆ.