ಮಂಗಳೂರು: ಹಂಪನಕಟ್ಟೆಯಲ್ಲಿ ಶೂ ಅಂಗಡಿಯೊಂದಕ್ಕೆ ಬೆಂಕಿ ತಗುಲಿ ಅಂಗಡಿ ಸಂಪೂರ್ಣ ಭಸ್ಮಗೊಂಡ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಪಕ್ಕದ ಎರಡು ಅಂಗಡಿಗಳಿಗೂ ಬೆಂಕಿ ವ್ಯಾಪಿಸಿದ್ದು, ಯುರೋಪ್ ಹೆಸರಿನ ಶೂ ಅಂಗಡಿ ಸಂಪೂರ್ಣ ಸುಟ್ಟು ಹೋಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಶಾರ್ಟ್ ಸರ್ಕ್ಯೂಟ್ನಿಂದಾಗಿ ಈ ಅವಘಡ ಸಂಭವಿಸಿರುವುದಾಗಿ ಎನ್ನಲಾಗಿದೆ. ಬೆಂಕಿ ದುರ್ಘಟನೆಯಿಂದ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ ಎಂದು ವರದಿಯಾಗಿದೆ.
ಮಂಗಳೂರು: ಹಂಪನಕಟ್ಟೆಯ ಶೂ ಅಂಗಡಿಯಲ್ಲಿ ಬೆಂಕಿ ಅವಘಡ




