ಭಾನುವಾರ, 25 ಅಕ್ಟೋಬರ್ 2026

ಮಂಗಳೂರು ಸಮುದ್ರದಲ್ಲಿ ಅಲೆಗಳ ಅಬ್ಬರ, ಬೋಟ್ ಮುಳುಗಡೆ; 6 ಮೀನುಗಾರರ ರಕ್ಷಣೆ

ಮಂಗಳೂರು: ನಗರದ ಹಳೆ ಬಂದರು (ದಕ್ಕೆ) ಸಮೀಪ ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ಬೋಟ್‌ವೊಂದು ಶನಿವಾರ ಸಂಜೆ ಬಿರುಗಾಳಿ ಹಾಗೂ ಭಾರೀ ಅಲೆಗಳ ಅಬ್ಬರಕ್ಕೆ ಸಿಲುಕಿ ಮುಳುಗಡೆಯಾಗಿದೆ. ಬೋಟ್‌ನಲ್ಲಿದ್ದ ಆರು ಮಂದಿ ಮೀನುಗಾರರನ್ನು ಸಮೀಪದಲ್ಲಿದ್ದ ಸ್ಥಳೀಯ ಮೀನುಗಾರರು ತಕ್ಷಣ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ.

Sponsored

ಪುತ್ತೂರು: ಅಕ್ರಮ ಜಾನುವಾರು ಸಾಗಾಟ, ಆರೋಪಿ ವಶಕ್ಕೆ

Marriage AdMarriage AdSponsored

ಆಳಸಮುದ್ರ ಮೀನುಗಾರಿಕೆಗೆ ತೆರಳದೆ ದಡದ ಸಮೀಪ ‘ಕರೆ ಫಿಶಿಂಗ್’ ನಡೆಸಲು ಹೊರಟಿದ್ದ ಬೋಟ್ ಅಳಿವೆಬಾಗಿಲು ದಾಟಿದ ಕೆಲವೇ ಕ್ಷಣಗಳಲ್ಲಿ ಬಿರುಗಾಳಿಗೆ ಸಿಲುಕಿದೆ. ಏಕಾಏಕಿ ಅಬ್ಬರಿಸಿದ ಗಾಳಿ ಹಾಗೂ ಬೃಹತ್ ಅಲೆಗಳ ಹೊಡೆತಕ್ಕೆ ಬೋಟ್ ನಿಯಂತ್ರಣ ಕಳೆದುಕೊಂಡು ನೀರಿನಲ್ಲಿ ಮುಳುಗಲು ಆರಂಭಿಸಿದೆ.

ಪುತ್ತೂರು: ಅಕ್ರಮ ಜಾನುವಾರು ಸಾಗಾಟ, ಆರೋಪಿ ವಶಕ್ಕೆ

ಬಂಟ್ವಾಳ ತಾಲೂಕಿನ ನಿವಾಸಿ ಇಬ್ರಾಹಿಂ ಖಲೀಲ್ ಮೂಸಾ ಅವರಿಗೆ ಸೇರಿದ ‘ಅಯಾನ್’ ಹೆಸರಿನ ಟ್ರಾಲರ್ ಬೋಟ್ ಇದಾಗಿದೆ. 15.100 ಮೀಟರ್ ಉದ್ದದ ಈ ಬೋಟ್‌ನ ನೋಂದಣಿ ಸಂಖ್ಯೆ IND-KA-01-MM-3992 ಎಂದು ತಿಳಿದುಬಂದಿದೆ. ಬೋಟ್ ಮುಳುಗುತ್ತಿರುವ ದೃಶ್ಯ ಸ್ಥಳೀಯರ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿಡಿಯೋದಲ್ಲಿ ಬೋಟ್‌ನ ಮುಂಭಾಗದ ಭಾಗ ಮಾತ್ರ ನೀರಿನ ಮೇಲೆ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಅದು ಸಮುದ್ರದ ಅಲೆಗಳ ನಡುವೆ ಮುಳುಗುತ್ತಿರುವ ದೃಶ್ಯ ಕಂಡುಬಂದಿದೆ.
ಘಟನೆ ವೇಳೆ ಬೋಟ್‌ನಲ್ಲಿದ್ದ ಆರು ಮಂದಿ ಸಿಬ್ಬಂದಿ ಅಪಾಯಕ್ಕೆ ಸಿಲುಕಿದ್ದರು. ಇದನ್ನು ಗಮನಿಸಿದ ಸಮೀಪದ ಬೋಟ್‌ಗಳಲ್ಲಿದ್ದ ಮೀನುಗಾರರು ಕೂಡಲೇ ಸ್ಥಳಕ್ಕೆ ಧಾವಿಸಿ ಹಗ್ಗ ಸೇರಿದಂತೆ ರಕ್ಷಣಾ ಸಾಧನಗಳ ನೆರವಿನಿಂದ ಎಲ್ಲರನ್ನೂ ತಮ್ಮ ಬೋಟ್‌ಗೆ ಸ್ಥಳಾಂತರಿಸಿದ್ದಾರೆ.

ಪುತ್ತೂರು: ಅಕ್ರಮ ಜಾನುವಾರು ಸಾಗಾಟ, ಆರೋಪಿ ವಶಕ್ಕೆ

ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಬೋಟ್‌ನಲ್ಲಿದ್ದ ಎಲ್ಲಾ ಆರು ಮಂದಿ ಮೀನುಗಾರರು ಸುರಕ್ಷಿತವಾಗಿದ್ದಾರೆ ಎಂದು ಮೀನುಗಾರಿಕಾ ಇಲಾಖೆ ಜಂಟಿ ನಿರ್ದೇಶಕಿ ದರ್ಶನಾ ಕೆ.ಟಿ. ತಿಳಿಸಿದ್ದಾರೆ.