# ಮಂಗಳೂರು: ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ: ಆರೋಪಿ ಬಂಧನ

- Link: https://hosakannada.com/news/mangaluru-husband-slashes-wife-with-a-knife-and-kills-her-accused-arrested/
- Published: 2026-10-12T19:07:01+00:00
- Author: ಹೊಸಕನ್ನಡ ನ್ಯೂಸ್

ಮಂಗಳೂರು: ಅನೈತಿಕ ಸಂಬಂಧದ ಶಂಕೆಯ ಹಿನ್ನೆಲೆಯಲ್ಲಿ ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿದ 
ಆರೋಪದ ಮೇಲೆ ಪತಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.

Sponsored

ಮಂಗಳೂರು ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಪಂಜಿಮೊಗರು ಗ್ರಾಮದ ಉರುಂಡಾಡಿಗುಡ್ಡೆಯಲ್ಲಿ ಅ.
12ರಂದು ಈ ಘಟನೆ ನಡೆದಿದೆ. ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಶಿವಲಿಂಗಪ್ಪ (40) ಎಂಬಾತ ತನ್ನ ಪತ್ನಿ
ಸೋನಾಲಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Advertisement

ಈ ಕುರಿತು ಕಾವೂರು ಪೊಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 138/2026ರ ಅಡಿಯಲ್ಲಿ ಭಾರತೀಯ ನ್ಯಾಯ ಸಂಹಿತೆ
2023ರ ಕಲಂ 103(2) ಮತ್ತು 238ರಂತೆ ಪ್ರಕರಣ ದಾಖಲಾಗಿದೆ.

Advertisement
