Home News Mangaluru: ಹಿರಿಯ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಹೃದಯಾಘಾತದಿಂದ ಸಾವು

Mangaluru: ಹಿರಿಯ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಹೃದಯಾಘಾತದಿಂದ ಸಾವು

Mangaluru

Hindu neighbor gifts plot of land

Hindu neighbour gifts land to Muslim journalist

Mangaluru: ಹಿರಿಯ ಕಲಾವಿದ ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ಸೇಡಿಯಾಪು ನಿವಾಸಿ ಗಂಗಾಧರ ಪುತ್ತೂರು (59) ಉಡುಪಿ ಕೋಟದಲ್ಲಿ ವೇಷ ಕಳಚುತ್ತಿರುವಾಗ ಹೃದಯಾಘಾತಕ್ಕೊಳಗಾಗಿ ಸಾವಿಗೀಡಾದ ಘಟನೆಯೊಂದು ನಡೆದಿದೆ.

ಇದನ್ನೂ ಓದಿ: Udupi: ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ನಿಧನ

ಬುಧವಾರ ಕೋಟ ಗಾಂಧಿ ಮೈದಾನದಲ್ಲಿ ನಡೆದ ಯಕ್ಷಗಾನದಲ್ಲಿ ಧರ್ಮಸ್ಥಳ ಕ್ಷೇತ್ರ ಮಹಾತ್ಮಿಯ ಕುಕ್ಕಿತ್ತಾಯನ ವೇಷ ನಿರ್ವಹಿಸಿದ್ದು, ಚೌಕಿಗೆ ಮರಳಿ ಕಿರೀಟ ಆಭರಣಗಳನ್ನು ತೆಗೆದಿಟ್ಟು ಮುಖದ ಬಣ್ಣ ತೆಗೆಯುತ್ತಿರುವಾಗ ಹೃದಯಾಘಾತ ಉಂಟಾಗಿದೆ.

ಇದನ್ನೂ ಓದಿ: Prajwal Revanna: ಅಶ್ಲೀಲ ವೀಡಿಯೋ ಪ್ರಕರಣ; ಕಾರು ಚಾಲಕ ಕಾರ್ತಿಕ್‌ ಎಸ್ಕೇಪ್‌

ನಾಲ್ಕು ದಶಕಗಳಿಗಿಂತಲೂ ಹೆಚ್ಚು ಕಾಲ ಯಕ್ಷಗಾನದಲ್ಲಿ ಸೇವೆ ಸಲ್ಲಿಸಿದ ಇವರು, ಹಾಸ್ಯದ ಸ್ತ್ರೀ ಪಾತ್ರಗಳನ್ನು ನಿರ್ವಹಿಸುವ ಪ್ರೌಢಿಮೆಯನ್ನು ಹೊಂದಿದ್ದರು. ಮಾಲಿನಿ, ಚಿತ್ರಾಂಗದೆ, ಮೋಹಿನಿ, ದಾಕ್ಷಾಯಿಣಿ, ಪ್ರಮೀಳೆ, ಶ್ರೀದೇವಿ, ಸೀತೆ, ದೇವೇಂದ್ರ, ದುಶ್ಯಾಸನ ಮೊದಲ ಪಾತ್ರಗಳಲ್ಲಿ ಸೈ ಎನಿಸಿಕೊಂಡ ಕಲಾವಿದ ಇವರಾಗಿದ್ದರು.