ಸೋಮವಾರ, 26 ಅಕ್ಟೋಬರ್ 2026
Trending

ಮಂಗಳೂರು | ಅಕ್ರಮ ಚಿನ್ನ ಸಾಗಾಟ, ಪ್ರಯಾಣಿಕ ಕಸ್ಟಮ್ಸ್ ಅಧಿಕಾರಿಗಳ ವಶಕ್ಕೆ

ದುಬೈಯಿಂದ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದ ಘಟನೆ ನಡೆದಿದೆ.

Sponsored

ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದ ಮೂಲಕ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕನೋರ್ವ ದುಬೈಯಿಂದ 32,55,330 ರೂ. ಮೌಲ್ಯದ 663 ಗ್ರಾಂ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಸಾಗಿಸುತ್ತಿರುವುದು ಪತ್ತೆಯಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಆರೋಪಿಯನ್ನು ವಶಕ್ಕೆ ಪಡೆದಿರುವ ಕಸ್ಟಮ್ಸ್ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.