ಮಂಗಳವಾರ, 27 ಅಕ್ಟೋಬರ್ 2026
Trending

ಮಣಿಪಾಲ: ಸಾರ್ವಜನಿಕ ರಸ್ತೆಯಲ್ಲಿ ಮಾರಕ ಆಯುಧದೊಂದಿಗೆ ವ್ಯಕ್ತಿಯ ಬಂಧನ

ಮಣಿಪಾಲ: ಸಾರ್ವಜನಿಕ ರಸ್ತೆಯಲ್ಲಿ ಮಾರಕಾಸ್ತ್ರಗಳನ್ನು ಇಟ್ಟುಕೊಂಡು ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಮಣಿಪಾಲ ಪೊಲೀಸರು ಬಂಧನ ಮಾಡಿರುವ ಘಟನೆ ಮಣಿಪಾಲದ ವಿದ್ಯಾರತ್ನಗರದಲ್ಲಿ ಮಂಗಳವಾರ ನಡೆದಿದೆ.

Sponsored

ಬಂಧಿತನನ್ನು ಉಡುಪಿಯ ಕಿನ್ನಿಮುಲ್ಕಿ ನಿವಾಸಿ ಮಹಮ್ಮದ್‌ ಪರ್ವೇಜ್‌ (26) ಎಂದು ಗುರುತಿಸಲಾಗಿದೆ. ಆರೋಪಿಯಿಂದ ಸುಮಾರು 20 ಇಂಚು ಉದ್ದದ ಕಬ್ಬಿಣದ ಲಾಂಗ್‌ ಹಾಗೂ 16 ಇಂಚು ಉದ್ದದ ಕಬ್ಬಿಣದ ಚಾಕುವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Advertisement
Advertisement

ವಿಚಾರಣೆ ಸಂದರ್ಭದಲ್ಲಿ ದಾವೂದ್‌, ಇಸಾಕ್‌ ಹಾಗೂ ಗರುಡ ಗ್ಯಾಂಗ್‌ ಜೊತೆ ವೈಮನಸ್ಸು ಇದ್ದಿದು, ಅವರ ಮೇಲೆ ಹಲ್ಲೆ ಮಾಡುವ ಉದ್ದೇಶದಿಂದ ಆಯುಧಗಳನ್ನು ಇಟ್ಟುಕೊಂಡಿರುವುದಾಗಿ ಆರೋಪಿ ತಿಳಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಆರೋಪಿಯನ್ನು ಬಂಧನ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Advertisement