Home News Udupi: ಮರವಂತೆ ಕಡಲ ತೀರದಲ್ಲಿ ಗಾಂಜಾ : ಇಬ್ಬರು ಅರೆಸ್ಟ್!

Udupi: ಮರವಂತೆ ಕಡಲ ತೀರದಲ್ಲಿ ಗಾಂಜಾ : ಇಬ್ಬರು ಅರೆಸ್ಟ್!

Hindu neighbor gifts plot of land

Hindu neighbour gifts land to Muslim journalist

Udupi: ಮರವಂತೆ ಕಡಲ ತೀರದಲ್ಲಿ ಗಾಂಜಾ ಸೇವನೆ ಮಾಡಿದ ಶರ್ಪುದ್ದೀನ್ (22ವ), ಮಹಮ್ಮದ್ ಸುಹೇಬ್ (21ವ) ಎಂಬವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಗಂಗೊಳ್ಳಿ ಠಾಣೆ ಪೊಲೀಸ್ ಉಪನಿರೀಕ್ಷಕರಾದ ಬಸವರಾಜ ಕನಶೆಟ್ಟಿ ಅವರು ರೌಂಡ್ಸ್ ಕರ್ತವ್ಯದಲ್ಲಿರುವಾಗ ಮರವಂತೆ ಬೀಚ್ ಬಳಿ ಇಬ್ಬರು ವ್ಯಕ್ತಿಗಳು ಗಾಂಜಾ ಸೇವಿಸುತ್ತಿರುವ ಕುರಿತು ಲಭಿಸಿದ ಮಾಹಿತಿ ಮೇರೆಗೆ ಸ್ಥಳಕ್ಕೆ ಹೋಗಿ ಪರಿಶೀಲಿಸಿದಾಗ ಇಬ್ಬರೂ ವ್ಯಕ್ತಿಗಳು ತೊದಲುತ್ತಾ ಮಾತನಾಡುತ್ತಿದ್ದು, ಅಮಲಿನಲ್ಲಿರುವುದು ಕಂಡುಬಂದಿದೆ. ಅವರನ್ನು ಕುಂದಾಪುರ ಶ್ರೀ ಮಾತಾ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಅವರು ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.