Home News ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

ಧರ್ಮಸ್ಥಳದಲ್ಲಿ ಸಾಮೂಹಿಕ ವಿವಾಹ: ಅರ್ಜಿ ಆಹ್ವಾನ

Hindu neighbor gifts plot of land

Hindu neighbour gifts land to Muslim journalist

ಧರ್ಮಸ್ಥಳ (ದ.ಕ.): ಧರ್ಮಸ್ಥಳದಲ್ಲಿ 2026 ರ ಏ.29 ರಂದು ಸಂಜೆ 6.40ರ ಗೋಧೋಳಿ ಲಗ್ನದಲ್ಲಿ 54 ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ. ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳಸೂತ್ರ ನೀಡಲಾಗುವುದು.

ಮದುವೆಯ ಎಲ್ಲಾ ವೆಚ್ಚವನ್ನು ಧರ್ಮಾಧಿಕಾರಿ ಡಾ. ಡಿ ವಿರೇಂದ್ರ ಹೆಗ್ಗಡೆ ಅಧ್ಯಕ್ಷರಾಗಿರುವ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಸ್‌ ಭರಿಸಲಿದೆ

ಮದುವೆ ಆಗಲಿಚ್ಛಿಸುವವರು 2026 ರ ಎ.25 ರೊಳಗೆ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ. ಒಟ್ಟು 13 ಸಾವಿರ ಜೋಡಿ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದ್ದಾರೆ.