Home latest ಅಕ್ರಮ ಮತಾಂತರ ಆರೋಪ; ಹೋಟೆಲ್ ಮೇಲೆ ಕ್ಷಿಪ್ರ ದಾಳಿ ನಡೆಸಿದ ಬಜರಂಗದಳ ಕಾರ್ಯಕರ್ತರು

ಅಕ್ರಮ ಮತಾಂತರ ಆರೋಪ; ಹೋಟೆಲ್ ಮೇಲೆ ಕ್ಷಿಪ್ರ ದಾಳಿ ನಡೆಸಿದ ಬಜರಂಗದಳ ಕಾರ್ಯಕರ್ತರು

Hindu neighbor gifts plot of land

Hindu neighbour gifts land to Muslim journalist

ಚರ್ಚೊಂದರ ಪಾದ್ರಿಗಳು ಅಕ್ರಮ ಮತಾಂತರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಬಜರಂಗ ದಳದ ಕಾರ್ಯಕರ್ತರು ದಾಳಿ ನಡೆಸಿದ ಘಟನೆಯೊಂದು ಭಾನುವಾರ ಚಿಕ್ಕಮಗಳೂರಿನಲ್ಲಿ ನಡೆದಿದೆ. ನಗರದ ಬಾರ್ ಲೈನ್ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ಮೇಲೆ ದಾಳಿ ನಡೆಸಲಾಗಿದ್ದು, ಪರಿಸ್ಥಿತಿ ಸ್ವಲ್ಪ ಮಟ್ಟಿಗೆ ಉದ್ವಿಗ್ನಗೊಂಡಿತ್ತು.

ಮತಾಂತರ ಸಂಬಂಧ ಚರ್ಚೊಂದರ ಪಾದ್ರಿಗಳು ಹಾಗೂ ನೂರಾರು ಜನರು ಸಭೆ ನಡೆಸುತ್ತಿದ್ದು, ಇದರ ಬಗ್ಗೆ ಮಾಹಿತಿ ದೊರೆತ ಕೂಡಲೇ ಬಜರಂಗದಳದ ಕಾರ್ಯಕರ್ತರು ದಾಳಿ ನಡೆಸಿದ್ದಾರೆ.

ಏಕಾಏಕಿ ದಾಳಿ ನಡೆಸಿದ್ದರಿಂದ ಅಲ್ಲಿದ್ದವರು ಗಾಬರಿಗೊಂಡಿದ್ದು, ಅನುಮತಿ ಇಲ್ಲದೆ ಸಭೆ ನಡೆಸಲಾಗುತ್ತಿದೆ. ಮತಾಂತರಕ್ಕೆ ಪ್ರಚೋದನೆ ನೀಡುತ್ತಿದ್ದಾರೆ ಎಂದು ಆರೋಪಿಸಿರುವ ಕಾರ್ಯಕರ್ತರು, ಗ್ರಾಮೀಣ ಭಾಗದ ಜನರನ್ನು ಗುರಿಯಾಗಿಸಿಕೊಂಡು ಮತಾಂತರ ಮಾಡಲಾಗುತ್ತಿದೆ ಆರೋಪಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ನಗರ ಪೊಲೀಸ್ ಠಾಣೆಯ ಸಿಬ್ಬಂದಿಗಳು ಆಗಮಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ