ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬೆನ್ನಲ್ಲೇ ಕಾಕ್ರೋಚ್ ಜನತಾ ಪಾರ್ಟಿ ವಿಜಯೋತ್ಸವ ಆರಂಭ ಮಾಡಿದೆ. ʼವಿದ್ಯಾರ್ಥಿಗಳ ಶಕ್ತಿ ಚಿರಾಯುವಾಗಲಿʼ ಎಂದು ಸಿಜೆಪಿ ಪೋಸ್ಟ್ ಹಂಚಿಕೊಂಡಿದೆ.
ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ, ಧರ್ಮೇಂದ್ರ ಪ್ರಧಾನ್ ಕೊನೆಗೂ ರಾಜೀನಾಮೆ ನೀಡಿದ್ದಾರೆ. ಇದು ನಮ್ಮ ಧೈರ್ಯಕ್ಕೆ ಹೋರಾಟಕ್ಕೆ ಸಿಕ್ಕ ಜಯ, ನಾವು ನಿರ್ಭಯದಿಂದ ಹೋರಾಡಿದರೆ ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಯಾರಿಗೂ ಭಯಪಡಬೇಕಿಲ್ಲ. ನಿರ್ಭೀತ ಹೋರಾಟದಿಂದ ನಾವು ಯಾರ ರಾಜೀನಾಮೆಯನ್ನು ಬೇಕಾದರೂ ಪಡೆಯಬಹುದು ಎನ್ನುವುದಕ್ಕೆ ಇದು ಪುರಾವೆ ಎಂದಿದ್ದಾರೆ.



