

Meat Sale Ban: ಮೇ 5( ನಾಳೆ) ಶುಕ್ರವಾರದಂದು ಬುದ್ದ ಪೂರ್ಣಿಮೆ ಪ್ರಯುಕ್ತ ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇದ (Meat Sale Ban) ಆಜ್ಞೆಯನ್ನು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹೊರಡಿಸಿದೆ.
ಬುದ್ಧ ಪೂರ್ಣಿಮೆ ಪ್ರಯುಕ್ತ ಪ್ರಾಣಿ ವಧೆ ಮತ್ತು ಮಾಂಸ ಮಾರಾಟಕ್ಕೆ ನಿಷೇಧಾಜ್ಞೆ ಆದೇಶ ಹೊರಡಿಸಲಾಗಿದ್ದು, ಮೇ 5ರ ಶುಕ್ರವಾರದಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರಿಂದ ಆದೇಶ ಹೊರಡಿಸಲಾಗಿದೆ.
ಒಂದು ವೇಳೆ ಬಿಬಿಎಂಪಿ ವ್ಯಾಪ್ತಿಯ ಕಾಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಮಾಡಿದಲ್ಲಿ, ಮಾಂಸದ ಅಂಗಡಿಗಳನ್ನು ತೆರೆದಿಟ್ಟಲ್ಲಿ, ಪಾಲಿಕೆಯಿಂದ ಅವರ ಲೈಸೆನ್ಸ್ ರದ್ದುಪಡಿಸಿ, ಸರ್ಕಾರದ ನಿಯಮಾವಳಿಗಳ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಪಾಲಿಕೆಯ ಮುಖ್ಯ ಪಶುವೈದ್ಯಾಧಿಕಾರಿಗಳು ಪ್ರಕಟಣೆಯಲ್ಲಿ ಪ್ರಕಟಿಸಿದ್ದಾರೆ.













