Home News Megha Javali Park: ಕಲಬುರಗಿಯಲ್ಲಿ ಮೆಗಾ ಜವಳಿ ಪಾರ್ಕ್: ಒಂದು ಲಕ್ಷ ಜನರಿಗೆ ನೇರ ಉದ್ಯೋಗ...

Megha Javali Park: ಕಲಬುರಗಿಯಲ್ಲಿ ಮೆಗಾ ಜವಳಿ ಪಾರ್ಕ್: ಒಂದು ಲಕ್ಷ ಜನರಿಗೆ ನೇರ ಉದ್ಯೋಗ – ಪ್ರಿಯಾಂಕ್‌ ಖರ್ಗೆ

Hindu neighbor gifts plot of land

Hindu neighbour gifts land to Muslim journalist

Megha Javali Park: ಕಲ್ಯಾಣ ಕರ್ನಾಟಕದ(Kalyana Karnataka) ಅಭಿವೃದ್ಧಿಯ(Development) ದ್ಯೋತಕವಾಗಿ ಕಲಬುರಗಿ(Kalaburagi) ಜಿಲ್ಲೆಯ 1,000 ಎಕರೆ ಪ್ರದೇಶದಲ್ಲಿ ಮೆಗಾ ಜವಳಿ ಪಾರ್ಕ್‌ನ್ನು ಸ್ಥಾಪಿಸಲು ತೀರ್ಮಾನಿಸಲಾಗಿದೆ. ಈ ಮೂಲಕ ಬರೋಬ್ಬರಿ 1 ಲಕ್ಷ ಜನರಿಗೆ ನೇರ ಉದ್ಯೋಗ(Job) ಹಾಗೂ 2 ಲಕ್ಷ ಜನರಿಗೆ ಪರೋಕ್ಷ ಉದ್ಯೋಗ ಲಭಿಸಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ(Priyanka Kharge) ಮಾಹಿತಿ ನೀಡಿದ್ದಾರೆ. ಈ ಯೋಜನೆಗೆ ಬೇಕಾದ ಮೂಲ ಸೌಕರ್ಯಕ್ಕಾಗಿ 50 ಕೋಟಿ ರೂ. ಅನುದಾನವನ್ನು ಈ ಬಾರಿಯ ಬಜೆಟ್‌ನಲ್ಲಿ(Budget) ಘೋಷಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಕಲಬುರಗಿ ಡಿಸಿ ಕನೀಜ್ ಫಾತೀಮಾ ಮತ್ತು ಹಿರಿಯ ಅಧಿಕಾರಿಗಳ ಜೊತೆ ಬೆಂಗಳೂರಿನ ವಿಕಾಸ ಸೌಧದ ಕಚೇರಿಯಲ್ಲಿ ಸಭೆ ನಡೆಸಿದ ಸಚಿವರು, ಜವಳಿ ಪಾರ್ಕ್‌ಗೆ ಬೇಕಾದ ಮೂಲಭೂತ ಸೌಕರ್ಯಗಳನ್ನು ನೀಡುವ ಕುರಿತು ಸಭೆ ನಡೆಸಿದರು.

ಪಾರ್ಕ್‌ಗೆ ಬೇಕಾದ ಅವಶ್ಯಕತೆಗೆ ಅನುಗುಣವಾಗಿ ಸುಮಾರು 16 ಎಂ.ಎಲ್.ಡಿ ನೀರಿನ ಅಗತ್ಯವಿದೆ. ಮದಿ ಗ್ರಾಮದಲ್ಲಿ ನಿರ್ಮಾಣವಾಗಲಿರುವ ಬ್ಯಾರೇಜ್‌ನಿಂದ ನೀರು ಪೂರೈಕೆ ಮಾಡುವ ಬಗ್ಗೆ ಅಧಿಕಾರಿಗಳೊಂದಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಚರ್ಚಿಸಿದರು. ಅಷ್ಟಲ್ಲದೆ ಜವಳಿ ಪಾರ್ಕ್‌ ಆವರಣದಲ್ಲಿ ಇರುವ ಕೆರೆಯನ್ನು ಪುನರ್ಜೀವಗೊಳಿಸುವುದು ಮತ್ತು ಆದಷ್ಟು ಮಳೆನೀರು ಕೊಯ್ಲು ಪದ್ಧತಿ ಅಳವಡಿಸಿಕೊಳ್ಳುವ ಮುಖಾಂತರ ನೀರಿನ ಪರ್ಯಾಯ ವ್ಯವಸ್ಥೆಗಳನ್ನೂ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಜವಳಿ ಪಾರ್ಕ್‌ ಸಂಪರ್ಕಿಸುವ ರಸ್ತೆಗಳನ್ನು ದೀರ್ಘಕಾಲ ಬಾಳಿಕೆ ಬರುವ ಹಾಗೆ ನಿರ್ಮಿಸಲು ಸಚಿವರು ಹೇಳಿದರು.

ಜವಳಿ ಪಾರ್ಕ್‌ ಆವರಣದಲ್ಲಿ ಸೋಲಾರ್‌ ದೀಪಗಳನ್ನು ಅಳವಡಿಸಬೇಕು. ಈ ಮೂಲಕ ವಿದ್ಯುತ್‌ ಬಳಕೆಯನ್ನು ಮಿತವ್ಯಯಗೊಳಿಸುವಂತೆ ಸಲಹೆ ನೀಡಿದರು. ಇನ್ನು ಜವಳಿ ಪಾರ್ಕ್‌ಗೆ 180 ಮೆಗಾ ವ್ಯಾಟ್ ವಿದ್ಯುತ್ ಅಗತ್ಯವಿದ್ದು, ಇದರ ಸಂಪರ್ಕ ಸಂಬಂಧ 220 ಕೆ.ವಿ ಪವರ್‌ ಸಬ್‌ಸ್ಟೇಷನ್ ನಿರ್ಮಾಣಕ್ಕೆ ಪಾರ್ಕ್‌ ಆವರಣದಲ್ಲಿ ಸ್ಥಳ ಗುರುತಿಸಲಾಗಿದೆ ಎಂದು ಅಧಿಕಾರಿಗಳು ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಮಾಹಿತಿ ನೀಡಿದರು.