Home News ಋತುಚಕ್ರ ರಜೆಗೆ ಹೈಕೋರ್ಟ್ ತಡೆ

ಋತುಚಕ್ರ ರಜೆಗೆ ಹೈಕೋರ್ಟ್ ತಡೆ

Hindu neighbor gifts plot of land

Hindu neighbour gifts land to Muslim journalist

ಬೆಂಗಳೂರು: ಋತುಚಕ್ರ ರಜೆಗೆ ಸಂಬಂಧಿಸಿದ ರಾಜ್ಯ ಸರ್ಕಾರದ ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರಿದ್ದ ಹೈಕೋರ್ಟ್ ಪೀಠದಿಂದ ಈ ತಡೆಯಾಜ್ಞೆ ನೀಡಲಾಗಿದೆ. ನವೆಂಬರ್ 20 ರಂದು 1 ದಿನದ ಋತು ಚಕ್ರ ರಜೆ ಸಂಬಂಧ ಸರ್ಕಾರ ಆದೇಶ ಹೊರಡಿಸಿತ್ತು.
ಸರ್ಕಾರದ ಆದೇಶ ಪ್ರಶ್ನಿಸಿ ಬೆಂಗಳೂರು ಹೋಟೆಲ್ ಮಾಲೀಕರ ಸಂಘ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ವಿಚಾರಣೆಯ ವೇಳೆ ಕಾಯ್ದೆಯಲ್ಲಿಲ್ಲದ ನಿಯಮವನ್ನು ಸರ್ಕಾರಿ ಆದೇಶದ ಮೂಲಕ ಜಾರಿಗೊಳಿಸಲಾಗಿದೆ.

ರಾಜ್ಯ ಸರ್ಕಾರ ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ದಿನ ಋತುಚಕ್ರ ರಜೆ ಕಡ್ಡಾಯ ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ಸರ್ಕಾರದ ಈ ಆದೇಶದ ವಿರುದ್ಧ ಹೋಟೆಲ್ ಉದ್ಯಮಕ್ಕೆ ಸಂಬಂಧಿಸಿದ ಸಂಘಟನೆಗಳು ಕಾನೂನು ಕಾಲಗಳು ಇಳಿದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ.

ಈ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್, ಆದೇಶದ ಕುರಿತು ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಸಮಯ ನೀಡಿದ್ದು, ಚಳಿಗಾಲದ ನ್ಯಾಯಮಂಡಳಿಯ ರಜೆ ನಂತರ ಉತ್ತರ ನೀಡುವಂತೆ ಸೂಚಿಸಿದೆ. ಅಂತಿಮ ತೀರ್ಪು ಹೊರಬರುವವರೆಗೆ ಆದೇಶದ ಅನುಷ್ಠಾನಕ್ಕೆ ಮಧ್ಯಂತರ ತಡೆ ನೀಡಿರುವುದಾಗಿ ನ್ಯಾಯಾಲಯ ತಿಳಿಸಿದೆ.

ಕಳೆದ ತಿಂಗಳು, 2025ರ ನವೆಂಬರ್ 20ರಂದು ರಾಜ್ಯ ಸರ್ಕಾರ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಸಂಸ್ಥೆಗಳ ಮಹಿಳಾ ನೌಕರರಿಗೆ ತಿಂಗಳಿಗೆ ಒಂದು ದಿನ ವೇತನ ಸಹಿತ ಋತುಚಕ್ರ ರಜೆ ಕಡ್ಡಾಯವೆಂದು ಸರ್ಕಾರ ಘೋಷಿಸಿತ್ತು.