Home News Karnataka: ರಾಜ್ಯದಲ್ಲಿ ದುಡಿಯುವ ಮಹಿಳೆಯರಿಗೆ ಋತುಚಕ್ರ ರಜೆ ಕಡ್ಡಾಯ: ನಿಯಮ ಪಾಲಿಸದ ಕಂಪನಿಗಳ ವಿರುದ್ಧ ಕ್ರಮ

Karnataka: ರಾಜ್ಯದಲ್ಲಿ ದುಡಿಯುವ ಮಹಿಳೆಯರಿಗೆ ಋತುಚಕ್ರ ರಜೆ ಕಡ್ಡಾಯ: ನಿಯಮ ಪಾಲಿಸದ ಕಂಪನಿಗಳ ವಿರುದ್ಧ ಕ್ರಮ

Hindu neighbor gifts plot of land

Hindu neighbour gifts land to Muslim journalist

Karnataka: ರಾಜ್ಯದಲ್ಲಿ ದುಡಿಯುವ ಮಹಿಳೆಯರಿಗೆ ಋತುಚಕ್ರದ ಸಮಯದಲ್ಲಿ ರಜೆ ನೀಡುವ ನೀತಿಯನ್ನು ಎಲ್ಲಾ ಕಂಪನಿಗಳು ಪಾಲಿಸಬೇಕು. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಬೇಕಾಗುತ್ತದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಎಚ್ಚರಿಕೆ ನೀಡಿದ್ದಾರೆ.

ಹೆಣ್ಣು ಮಕ್ಕಳ ಹಿತದೃಷ್ಟಿಯಿಂದ ಸರ್ಕಾರ ಕಾನೂನು ತಂದಿದೆ. ವಿರೋಧ ವ್ಯಕ್ತಪಡಿಸುವುದು ಸರಿಯಲ್ಲ. ಶ್ರೀಮಂತರ ಹೆಣ್ಣು ಮಕ್ಕಳಿಗೆ ಸೌಲಭ್ಯ ಇರುತ್ತದೆ. ದುಡಿಯುವ ವರ್ಗದ ಹೆಣ್ಣುಗಳಿಗೆ ಸರ್ಕಾರ ವರ್ಷಕ್ಕೆ 12 ವೇತನ ಸಹಿತ ರಜೆ ಘೋಷಿಸಿ ಈ ನೀತಿಯನ್ನು ಜಾರಿ ಮಾಡಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:Filmfare Awards 2025: ‘ಫಿಲ್ಮ್ ಫೇರ್’ ಅವಾರ್ಡ್ ಪ್ರಕಟ: ವಿಜೇತರ ಪಟ್ಟಿ ಇಲ್ಲಿದೆ

ಇದನ್ನು ಕೇವಲ ಕಾನೂನು ಎನ್ನುವ ದೃಷ್ಟಿಯಲ್ಲಿ ನೋಡದೆ ಮಾನವೀಯ ದೃಷ್ಟಿಯಿಂದಲೂ ಕಂಪನಿಗಳು ನೋಡಬೇಕು. ಎಲ್ಲಾ ವರ್ಗಗಳೊಂದಿಗೆ ಚರ್ಚಿಸಿ ನಿಯಮಗಳನ್ನು ರೂಪಿಸಲಾಗಿದೆ. ಋತುಚಕ್ರ ರಜೆ ನೀತಿ ಸಂಬಂಧ ವಿಧಾನಸಭೆಯಲ್ಲಿ ವಿಧೇಯಕ ಮಂಡಿಸಲಾಗುವುದು. ಇಲ್ಲವೇ ಸುಗ್ರೀವಾಜ್ಞೆ ತರಲಾಗುವುದು ಎಂದು ಹೇಳಿದ್ದಾರೆ.