Home News ಹವಾಮಾನ ಇಲಾಖೆಯಿಂದ ಕಟ್ಟೆಚ್ಚರ ! ನಾಳೆಯಿಂದ ಈ‌ ಜಿಲ್ಲೆಗಳಿಗೆ ಕಾದಿದೆ ಗಂಡಾಂತರ!

ಹವಾಮಾನ ಇಲಾಖೆಯಿಂದ ಕಟ್ಟೆಚ್ಚರ ! ನಾಳೆಯಿಂದ ಈ‌ ಜಿಲ್ಲೆಗಳಿಗೆ ಕಾದಿದೆ ಗಂಡಾಂತರ!

Hindu neighbor gifts plot of land

Hindu neighbour gifts land to Muslim journalist

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಭಾನುವಾರ ಅಸಾನಿ ಚಂಡಮಾರುತವಾಗಿ ಸೃಷ್ಟಿಯಾಗಿದ್ದು, ಉತ್ತರ ಆಂಧ್ರಪ್ರದೇಶ, ಪಶ್ಚಿಮ ಬಂಗಾಳ ಹಾಗೂ ಕರಾವಳಿ ಓರಿಸ್ಸಾದತ್ತ ಮಾರುತಗಳು ಚಲಿಸಲಿದ್ದು, ಹೆಚ್ಚು ಮಳೆ ಬೀಳಲಿದೆ.

ಅಸಾನಿ ಚಂಡಮಾರುತ ಹಿನ್ನೆಲೆ ಕರ್ನಾಟಕದಲ್ಲಿಯೂ ಉತ್ತಮ ವರ್ಷಧಾರೆ ಬರಲಿದೆ. ಗಾಳಿಯ ವೇಗ ಹೆಚ್ಚಿರುವ ಹಿನ್ನೆಲೆಯಲ್ಲಿ ಸಮುದ್ರದಲ್ಲಿ ಮೀನುಗಾರಿಕೆಯಲ್ಲಿ ತೊಡಗಿರುವ ಮೀನುಗಾರರು ತಕ್ಷಣ ವಾಪಸ್ ಬರುವಂತೆ ಹವಾಮಾನ ಇಲಾಖೆ ಸೂಚಿಸಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು, ಬೆಂ.ಗ್ರಾಮಾಂತರ, ಕೋಲಾರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಹಾವೇರಿ, ಬಳ್ಳಾರಿ, ಗದಗ, ಧಾರವಾಡ, ಬೆಳಗಾವಿ, ಕೊಪ್ಪಳ, ಬಾಗಲಕೋಟೆ, ಕಲಬುರಗಿ ಮತ್ತು ಬೀದರ್‌ನಲ್ಲಿ ಮೇ 9ರಂದು ಭಾರಿ ಮಳೆ ಸುರಿಯಲಿದ್ದು, ಹೈ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಈ ಚಂಡಮಾರುತಕ್ಕೆ ʼಅಸಾನಿʼ ಎಂದು ಹೆಸರಿಡಲಾಗಿದೆ. ಅಸಾನಿ ಎಂದರೆ ಶ್ರೀಲಂಕಾದ ಸಿಂಹಳಿ ಭಾಷೆಯಲ್ಲಿ ಕ್ರೋಧ ಎಂದರ್ಥ. ಸದ್ಯ ಚಂಡಮಾರುತದ ಅಬ್ಬರ ಒಡಿಶಾ ಕಡೆಗೆ ಸಾಗುತ್ತಿದ್ದು, ಮೇ 9 ಮತ್ತು 10ರಂದು ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಗಂಟೆಗೆ 80 ರಿಂದ 90 ಕಿಲೋ ಮೀಟರ್‌ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಅಂದಾಜು ಮಾಡಲಾಗಿದೆ. ಮೇ 10 ರ ಬಳಿಕ ಗಾಳಿಯ ವೇಗ ಕಡಿಮೆಯಾಗಲಿದೆ ಎನ್ನಲಾಗಿದೆ.