ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಹಾಗೂ ಭಾರತೀಯ ಹವಾಮಾನ ಇಲಾಖೆ (IMD) ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಮುನ್ಸೂಚನೆ ಹೆಚ್ಚಾಗಿದ್ದು, ಮುಂದಿನ 5 ದಿನಗಳ ಕಾಲ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಭಾರಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ನೆಚ್ಚರಿಕೆ ನೀಡಿದೆ.
Sponsoredಇಂದಿನಿಂದ (ಮೇ 29) ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ (Yellow Alert) ಘೋಷಿಸಿದೆ. ಇನ್ನು ಬೆಂಗಳೂರಿನಲ್ಲೂ ಕೂಡ ಇಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
Marriage AdSponsoredಕರಾವಳಿ ಕರ್ನಾಟಕದ (Coastal Karnataka) ಜಿಲ್ಲೆಗಳಲ್ಲೂ ಸಹ ಇಂದಿನಿಂದ ಮುಂದಿನ ಐದು ದಿನಗಳ ಕಾಲ ಸಿಡಿಲು ಹಾಗೂ ಮಿಂಚಿನಿಂದ ಕೂಡಿರುವ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದ್ದು, ಮೀನುಗಾರರು ಮತ್ತು ನದಿ ತೀರದ ಜನರಿಗೆ ಜಾಗರೂಕರಾಗಿರಲು ಸೂಚಿಸಲಾಗಿದೆ.




