Accident: ನಿಂತಿದ್ದ ಲಾರಿಗೆ ಮಿನಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಐವರು ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ನಡೆದಿದೆ.
Sponsoredಈ ಅಪಘಾತದಲ್ಲಿ ವಾಜೀದ್, ಮೆಹಬೂಬಿ, ಪ್ರಿಯಾಂಕಾ, ಮೆಹಬೂಬ್ ಸೇರಿ ಐವರು ಸಾವಿಗೀಡಾಗಿದ್ದಾರೆ. ಇವರೆಲ್ಲರೂ ಬಾಗಲಕೋಟೆ ಮೂಲದವರು ಎನ್ನಲಾಗಿದೆ.
ಕಲಬುರಗಿಯ ಖಾಜಾ ಬಂದೇನವಾಜ್ ದರ್ಗಾಕ್ಕೆ ತೆರಳುವಾಗ ಈ ಅಪಘಾತ ಸಂಭವಿಸಿದ್ದು, ಮಿನಿ ಬಸ್ನಲ್ಲಿದ್ದ ಒಟ್ಟು 15 ಜನರ ಪೈಕಿ ಐವರು ಸಾವಿಗೀಡಾಗಿದ್ದಾರೆ. 11 ಜನರಿಗೆ ಗಾಯವಾಗಿದೆ. ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲು ಮಾಡಲಾಗಿದೆ.




