Home News K N Rajanna: ಸಿದ್ದರಾಮಯ್ಯ ಸಂಪುಟದ ಪ್ರಬಲ ಸಚಿವನಿಂದ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ !!

K N Rajanna: ಸಿದ್ದರಾಮಯ್ಯ ಸಂಪುಟದ ಪ್ರಬಲ ಸಚಿವನಿಂದ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಣೆ !!

Hindu neighbor gifts plot of land

Hindu neighbour gifts land to Muslim journalist

K N Rajanna: ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿ, ಆ ರಾಜಕಾರಣದಿಂದ ಹಿಂದೆ ಸರಿಯುತ್ತಿರುವುದಾಗಿ ಸಿದ್ದರಾಮಯ್ಯ ಸಂಪುಟದ ಪ್ರಬಲ ಸಚಿವ, ಸಹಕಾರ ಮಂತ್ರಿ ಕೆ.ಎನ್.ರಾಜಣ್ಣ(KN Rajanna) ಘೋಷಣೆ ಹೊರಡಿಸಿದ್ದಾರೆ.

ಹೌದು, ಶನಿವಾರ ತುಮಕೂರಿನಲ್ಲಿ(Tumakuru) ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಧುಗಿರಿಯ ಕಾಂಗ್ರೆಸ್ ಶಾಸಕ, ಸಹಕಾರ ಸಚಿವ ಕೆ. ಎನ್. ರಾಜಣ್ಣ, “ಮುಂದಿನ ದಿನಗಳಲ್ಲಿ ವಿಧಾನಸಭೆ ಸೇರಿದಂತೆ ಯಾವುದೇ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಆದರೆ ಸಕ್ರಿಯ ರಾಜಕೀಯದಲ್ಲಿ ಇರುತ್ತೇನೆ. ಬೇಕಾದವರನ್ನು ಗೆಲ್ಲಿಸುವುದು, ಬೇಡದವರನ್ನು ಸೋಲಿಸುವ ಕೆಲಸ ಮಾಡುತ್ತೇನೆ’ ಎಂದು ತಿಳಿಸಿದ್ದಾರೆ.

ಇಷ್ಟೇ ಅಲ್ಲದೆ ಸಚಿವ ಕೆ. ಎನ್. ರಾಜಣ್ಣ ಚುನಾವಣಾ ರಾಜಕೀಯಕ್ಕೆ ಮಾತ್ರ ನಿವೃತ್ತಿ ಘೋಷಣೆ ಮಾಡಿದ್ದಾರೆ. ಆದರೆ, “ಸಕ್ರಿಯ ರಾಜಕೀಯದಲ್ಲಿ ಇರುತ್ತೇನೆ. ಬೇಕಾದವರನ್ನು ಗೆಲ್ಲಿಸುವುದು, ಬೇಡವಾದವರನ್ನು ಸೋಲಿಸುವ ಕೆಲಸ ಮಾಡುತ್ತೇನೆ” ಎಂದು ಸಚಿವರು ಪತ್ರಿಕಾಗೋಷ್ಠಿಯಲ್ಲಿ ಸ್ಪಷ್ಟಪಡಿಸಿದ್ದಾರೆ.

ಇಷ್ಟೇ ಅಲ್ಲದೆ ನಾನು ಪ್ರತಿನಿಧಿಸುವ ಮಧುಗಿರಿಯನ್ನು ಜಿಲ್ಲಾ ಕೇಂದ್ರ ಮಾಡುವ ಪ್ರಯತ್ನ ಮುಂದುವರಿಸುತ್ತೇನೆ. ನನ್ನ ಅಧಿಕಾರ ಮುಗಿಯುವುದರ ಒಳಗೆ ಜಿಲ್ಲಾ ಕೇಂದ್ರ ಮಾಡಿಸುತ್ತೇನೆ. ಜತೆಗೆ ಇತರೆ ಅಭಿವೃದ್ಧಿ ಕೆಲಸಗಳನ್ನು ಮಾಡಿಸುತ್ತೇನೆ. ಮುಂದಿನ ಚುನಾವಣೆ ದೃಷ್ಟಿಯನ್ನು ಇಟ್ಟುಕೊಂಡು ಈ ಕೆಲಸ ಮಾಡಿಸುತ್ತಿಲ್ಲ. ಮುಂದಿನ ಬಾರಿ ಚುನಾವಣೆಗೆ ಸ್ಪರ್ಧಿಸುವುದಿಲ್ಲ’ ಎಂದು ತಿಳಿಸಿದ್ದಾರೆ.