Home Education ಅಲ್ಪಸಂಖ್ಯಾತರ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | ಹೇಗೆ ಅರ್ಜಿ ಸಲ್ಲಿಸುವುದು ?

ಅಲ್ಪಸಂಖ್ಯಾತರ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | ಹೇಗೆ ಅರ್ಜಿ ಸಲ್ಲಿಸುವುದು ?

Hindu neighbor gifts plot of land

Hindu neighbour gifts land to Muslim journalist

ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವಾಲಯ ಭಾರತ ಸರ್ಕಾರ 2022-23ನೇ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲು ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತ ಸಮುದಾಯದ ಜೈನ್‌, ಬೌದ್ಧರು, ಸಿಖ್ಖರು, ಪಾರ್ಸಿ, ಮುಸ್ಲಿಂ ಮತ್ತು ಕ್ರೈಸ್ತ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ಪೋಸ್ಟ್ ಮೆಟ್ರಿಕ್ ಮತ್ತು ಮೆರಿಟ್ ಕಮ್ ಮೆನ್ಸ್ ಸ್ಕಾಲರಶೀಪ್‌ ನೀಡಲಾಗುವುದು ಎಂದು ತಿಳಿಸಿದೆ.

ಅಲ್ಪಸಂಖ್ಯಾತರ ನಿರ್ದೇಶನಾಲಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕರ್ನಾಟಕ ಸರ್ಕಾರದಿಂದ ಪೋಸ್ಟ್ ಮೆಟ್ರಿಕ್ ಮತ್ತು ಮೆರಿಟ್ ಕಮ್ ಮೆನ್ಸ್ ಸ್ಕಾಲರಶೀಪ್‌ ಗೆ ಅರ್ಜಿ ಆಹ್ವಾನಿಸಲಾಗಿದ್ದು, ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವಾಲಯ ಭಾರತ ಸರ್ಕಾರ ಇವರಿಂದ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.

ಮೊದಲ ಬಾರಿಗೆ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಕ್ಟೋಬರ್ 31, 2022 ಕೊನೆಯ ದಿನಾಂಕವಾಗಿದೆ. ಇನ್ನೂ ನವೀಕರಣ ವಿದ್ಯಾರ್ಥಿವೇತನಕ್ಕೆ ಎನ್‌ಸಿಪಿ ಅಡಿಯಲ್ಲಿ 2021-22ರ ಅವಧಿಯಲ್ಲಿ ವಿದ್ಯಾರ್ಥಿವೇತನ ಪಡೆದಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅಕ್ಟೋಬರ್ 31, 2022 ಕೊನೆಯ ದಿನಾಂಕವಾಗಿದೆ. ಈ ಮೇಲಿನ ಅರ್ಜಿಗಳನ್ನು ಆನ್‌ಲೈನ್‌ ಮೂಲಕ ಸಲ್ಲಿಸಲು ಅವಕಾಶ ನೀಡಲಾಗಿದೆ.

ಅರ್ಜಿ ಸಲ್ಲಿಸುವ ಪ್ರಮುಖ ನಿಯಮಗಳು:

•ವಿದ್ಯಾರ್ಥಿಯು ಈ ವಿದ್ಯಾರ್ಥಿ ವೇತನದಲ್ಲಿ ಯಾವುದಾದರು ಒಂದು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ.

•ವಿದ್ಯಾರ್ಥಿಗಳು ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟ್‌ಲ್ https://scholarships.gov.in/ ಭೇಟಿ ನೀಡಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು.

•ರಾಷ್ಟ್ರೀಯ ವಿದ್ಯಾರ್ಥಿವೇತನ ಪೋರ್ಟ್‌ಲ್‌ನಲ್ಲಿ ಅರ್ಜಿ ಭರ್ತಿ ಮಾಡುವಾಗ ವಿದ್ಯಾರ್ಥಿಗಳಿಗೆ ಯಾವುದೇ ಸಂಶಯ ಬಂದರೆ ಹೆಚ್ಚಿನ ಮಾಹಿತಿಯನ್ನು FAQ ನಲ್ಲಿ ತಿಳಿಯಬಹುದು.

•ವಿದ್ಯಾರ್ಥಿಗಳು ಕಡ್ಡಾಯವಾಗಿ ಚಾಲ್ತಿಯಲ್ಲಿರುವ ಬ್ಯಾಂಕ್‌ ಖಾತೆಯ ವಿವರಗಳನ್ನು ನಮೂದಿಸಬೇಕು.

•ಅಲ್ಪಸಂಖ್ಯಾತ ವಿದ್ಯಾರ್ಥಿಗಳು ರಾಷ್ಟ್ರೀಯ ವಿದ್ಯಾರ್ಥಿ ವೇತನ ಪೋರ್ಟಲ್‌ (NSP) ಮತ್ತು ರಾಜ್ಯ ವಿದ್ಯಾರ್ಥಿ ವೇತನ ಪೋರ್ಟಲ್ (SSP)ಗಳಲ್ಲಿ NSP ಐಡಿ ಯೊಂದಿಗೆ ಅರ್ಜಿ ಸಲ್ಲಿಸುವುದು ಕಡ್ಡಾಯವಾಗಿದೆ.

•ರಾಷ್ಟ್ರೀಯ ವಿದ್ಯಾರ್ಥಿ ವೇತನ ಪೋರ್ಟಲ್‌ (NSP)ನಲ್ಲಿ ವಿದ್ಯಾರ್ಥಿವೇತನ ಪಡೆಯದೇ ಇರುವ ವಿದ್ಯಾರ್ಥಿಗಳು ಮಾತ್ರ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್‌ (SSP)ನಲ್ಲಿ ಅರ್ಜಿ ಸಲ್ಲಿಸಬಹುದು.

ಈ ಮೇಲಿನ ಪ್ರಮುಖ ಸೂಚನೆಗಳನ್ನು ಆಧಾರಿಸಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಆದೇಶಿಸಿದೆ.

ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು:

•ವಿದ್ಯಾರ್ಥಿಯು ಅಧಿಸೂಚಿತ ಅಲ್ಪಸಂಖ್ಯಾತ ಸಮುದಾಯದ ಜೈನ್‌, ಬೌದ್ಧರು, ಸಿಖ್ಖರು, ಪಾರ್ಸಿ, ಮುಸ್ಲಿಂ ಮತ್ತು ಕ್ರೈಸ್ತ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಯಾಗಿರಬೇಕು.

•ವಿದ್ಯಾರ್ಥಿಯು ಭಾರತದಲ್ಲಿ ಸರ್ಕಾರದ ಅಥವಾ ಅಂಗಿಕೃತ ಖಾಸಗಿ ವಿಶ್ವವಿದ್ಯಾಲಯ/ಸಂಸ್ಥೆ/ ಕಾಲೇಜು/ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರಬೇಕು.

•ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಯು ಕೋರ್ಸ್‌ ಕನಿಷ್ಠ ಒಂದು ವರ್ಷದ ಅವಧಿಯಾಗಿರಬೇಕು.

•ವಿದ್ಯಾರ್ಥಿಯು ಹಿಂದಿನ ವರ್ಷದ ತರಗತಿಯಲ್ಲಿ ಶೇಕಡ 50 ರಷ್ಟು ಅಂಕಗಳಿಸಿಸರಬೇಕು.

ಹೆಚ್ಚಿನ ಮಾಹಿತಿಗಾಗಿ ವಿದ್ಯಾರ್ಥಿಗಳು ಇಲಾಖೆಯ ಅಧಿಕೃತ ವೆಬ್‌ಸೈಟ್‌ www.minortiyaffairs.gov.in ಅಥವಾ https://dom.karnataka.gov.in ಭೇಟಿ ನೀಡಬಹುದೆಂದು ತಿಳಿಸಲಾಗಿದೆ. ಅಥವಾ ಸಮಾಧಾನ್ ಹೆಲ್ಪ್‌ಲೈನ್ 1800-11-2001 ಅಥವಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕರ್ನಾಟಕ ಹೆಲ್ಪ್‌ಲೈನ್‌ ನಂಬರ್ -8277799990 ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ.

ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವಾಲಯ ಭಾರತ ಸರ್ಕಾರ ಇವರಿಂದ ದೊರಕಲಿರುವ ಈ ವಿದ್ಯಾರ್ಥಿವೇತನದ ಸದುಪಯೋಗವನ್ನು ಈ ಮೇಲಿನ ಅರ್ಹತೆಯುಳ್ಳ ಪ್ರತಿಯೊಬ್ಬ ವಿದ್ಯಾರ್ಥಿಗಳು ಪಡೆದುಕೊಳ್ಳಬಹುದಾಗಿದೆ.