Home News Teacher Misbehave: ಶಾಲಾ ಶೈಕ್ಷಣಿಕ ಪ್ರವಾಸದಲ್ಲಿ ವಿದ್ಯಾರ್ಥಿಯೊಂದಿಗೆ ಶಿಕ್ಷಕಿಯ ಮುದ್ದಾಟ; ಕಿಸ್‌ ನೀಡಿದ ಫೋಟೋ ವೈರಲ್‌!!!

Teacher Misbehave: ಶಾಲಾ ಶೈಕ್ಷಣಿಕ ಪ್ರವಾಸದಲ್ಲಿ ವಿದ್ಯಾರ್ಥಿಯೊಂದಿಗೆ ಶಿಕ್ಷಕಿಯ ಮುದ್ದಾಟ; ಕಿಸ್‌ ನೀಡಿದ ಫೋಟೋ ವೈರಲ್‌!!!

Teacher Misbehave
Image source: udayavani.com

Hindu neighbor gifts plot of land

Hindu neighbour gifts land to Muslim journalist

Teacher Misbehave: ಶೈಕ್ಷಣಿಕ ಪ್ರವಾಸಕ್ಕೆಂದು ತೆರಳಿದ್ದ ವೇಳೆ ಸರಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿಯರೊಬ್ಬರು ತನ್ನ ಮಗನ ವಯಸ್ಸಿನ ಅಪ್ರಾಪ್ತ ಬಾಲಕನೊಂದಿಗೆ ಅಸಭ್ಯವಾಗಿ ವರ್ತಿಸಿರುವ ಘಟನೆ ನಡೆದಿದೆ. ಈ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುರಗಮಲ್ಲ ಸರಕಾರಿ ಪ್ರೌಢಶಾಲೆಯಲ್ಲಿ ನಡೆದಿದೆ.

ಶಿಕ್ಷಕಿ ಬಾಲಕನೊಂದಿಗೆ ಅಸಭ್ಯವಾಗಿ ವರ್ತಿಸಿರುವುದು ಮಾತ್ರವಲ್ಲದೇ, ಆತನೊಂದಿಗೆ ರೊಮ್ಯಾಂಟಿಕ್‌ ವೀಡಿಯೋ ಹಾಗೂ ಚಿತ್ರಗಳನ್ನು ಮಾಡಿ, ಸೆರೆ ಹಿಡಿದು ತನ್ನ ಮೊಬೈಲ್‌ನಲ್ಲಿ ಸೆರೆ ಹಿಡಿದಿರುವ ಘಟನೆ ನಡೆದಿದೆ.
ಶಾಲಾ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ವೇಳೆ ಈ ಘಟನೆ ನಡೆದಿದ್ದು, ಈ ಫೋಟೋಗಳು ಸೋರಿಕೆಯಾಗಿ ವಿದ್ಯಾರ್ಥಿ ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ.

ಬಾಲನೊಂದಿಗೆ ವಿವಿಧ ಭಂಗಿಗಳಲ್ಲಿ ಫೋಟೋ ತೆಗೆದಿದ್ದು, ತಾನೋರ್ವ ಶಿಕ್ಷಕಿ ಎಂಬುವುದನ್ನು ಮರೆತು ಈ ಕೆಲಸವನ್ನು ಶಾಲೆಯ ಮುಖ್ಯ ಶಿಕ್ಷಕಿ ಪುಷ್ಪಲತಾ ಮಾಡಿದ್ದಾರೆ. ವಿದ್ಯಾರ್ಥಿ ಕೂಡಾ ಶಿಕ್ಷಕಿಯನ್ನು ಮುದ್ದಾಡಿದ್ದು, ಶಿಕ್ಷಕಿ ಬಾಲಕನಿಗೆ ಕಿಸ್‌ ಕೊಟ್ಟಿರುವ ಫೋಟೋಗಳು ಎಲ್ಲೆಡೆ ವೈರಲ್‌ ಆಗಿದೆ.

ವಿದ್ಯಾರ್ಥಿಯ ಪೋಷಕರು ಶಿಕ್ಷಕಿಯ ಈ ವರ್ತನೆಗೆ ಸಿಟ್ಟುಗೊಂಡಿದ್ದಾರೆ. ಬುಧವಾರ ಬೆಳಗ್ಗೆ ಈ ವಿಷಯ ತಿಳಿಯುತ್ತಿದ್ದಂತೆ ಪೋಷಕರು ಶಾಲೆಗೆ ತೆರಳಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವಿಷಯವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಗಮನಕ್ಕೆ ತರಲಾಗಿದೆ ಎಂದು ವರದಿಯಾಗಿದೆ.

ಇದನ್ನು ಓದಿ: Mental Health: ನಿಮ್ಮ ಫೇವರೇಟ್​ ಕ್ರಿಕೆಟ್​ ಸೋತು ಹೋದಾಗ ಮೆಂಟಲಿ ಅಪ್ಸೆಟ್​ ಆಗ್ತೀರಾ? ಆಗ ಈ ಟಿಪ್ಸ್​ ಫಾಲೋ ಮಾಡಿ