ಶನಿವಾರ, 24 ಅಕ್ಟೋಬರ್ 2026

ಪ್ರಪ್ರಥಮ ಬಾರಿಗೆ ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ – ಸ್ಥಳ ಮತ್ತು ದಿನಾಂಕ ನಿಗದಿ!!

ಜಗತ್ಪ್ರಸಿದ್ದ ಮೈಸೂರು ದಸರಾದಲ್ಲಿ ಈ ವರ್ಷ ಕರಾವಳಿಯ ಪ್ರಸಿದ್ಧ ಕ್ರೀಡೆಯಾದ ಕಂಬಳ ನಡೆಯಲಿದ್ದು, ದಿನಾಂಕವನ್ನು ನಿಗದಿ ಮಾಡಲಾಗಿದೆ ಎಂದು ಕಂಬಳದ ರುವಾರಿ ಪುತ್ತೂರು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.

ಶುಕ್ರವಾರ ಮೈಸೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪ್ರಥಮ ಸಭೆಯಲ್ಲಿ ಕಂಬಳ ದಿನಾಂಕ ಮತ್ತು ಸ್ಥಳ ನಿಗಧಿಮಾಡಲಾಗಿದ್ದು, ಅಕ್ಟೋಬರ್ ತಿಂಗಳ 18 ಮತ್ತು 19 ರಂದು ಕಂಬಳ ನಡೆಯಲಿದೆ. ಮೈಸೂರಿನಲ್ಲಿರುವ ಸರ್ ಎಂ ವಿಶ್ವೇಶ್ವರಯ್ಯ ತಾಂತ್ರಿಕ ವಿದ್ಯಾಲಯದ ಬಳಿ ಇರುವ ಸುಮಾರು 20 ಎಕ್ರೆ ಜಾಗದಲ್ಲಿ ಕಂಬಳ ಏರ್ಪಡಿಸಲಾಗಿದೆ. 

ಕಂಬಳದಲ್ಲಿ ಸುಮಾರು ೧೫೦ ಜೋಡಿ ಕೋಣಗಳು ಭಾಗವಹಿಸುವ ನಿರೀಕ್ಷೆ ಇದೆ. ಜುಲೈ ತಿಂಗಳ 15 ರೊಳಗಾಗಿ ಕಂಬಳಕ್ಕೆ ಭೂಮಿ ಪೂಜೆ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಹಿತ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಕಂಬಳ ಸಮಿತಿ ಪ್ರಮುಖರು, ಅಧಿಕಾರಿಗಳು ಭಾಗವಹಿಸಿದ್ದರು. ಸಭೆಯಲ್ಲಿ ಕೆಲವೊಂದು ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ದಿನಾಂಕ ಮ್ತತು ಸ್ಥಳವನ್ನು ಮಾತ್ರ ಪ್ರಥಮ ಸಭೆಯಲ್ಲಿ ಅಂತಿಮ ಮಾಡಲಾಗಿದೆ. ಉಳಿದಂತೆ ಎಲ್ಲಾ ವಿಚಾರಗಳು ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರವರ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಕಂಬಳದ ರೂಪುರೇಶೆಗಳ ಬಗ್ಗೆ ಅಂತಿಮ ತೀರ್ಮಾನವನ್ನು ಕೈಗೊಳ್ಳಲಾಗುತ್ತದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.