ಸೋಮವಾರ, 26 ಅಕ್ಟೋಬರ್ 2026
Trending

Neha Hiremath murder: ನೇಹಾ ಹಿರೇಮಠ ಕೊಲೆ ಹಿಂದೆ ಶಾಸಕರ ಕೈವಾಡ? ತಂದೆ ಬಿಚ್ಚಿಟ್ಟರು ಸ್ಪೋಟಕ ಮಾಹಿತಿ

Neha Hiremath murder: 2024ರ ಎಪ್ರಿಲ್ 18 ರಂದು ಹುಬ್ಬಳ್ಳಿಯ ವಿದ್ಯಾನಗರದ ಬಿವಿಬಿ ಇಂಜಿನಿಯರಿಂಗ್ ಕಾಲೇಜ್‌ನಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ಮತ್ತು ಕಾಂಗ್ರೆಸ್ ಮುಖಂಡ ನಿರಂಜನ ಹಿರೇಮಠ ಅವರ ಮಗಳು ನೇಹಾಳನ್ನ ಬರ್ಬರವಾಗಿ ಕೊಲೆ ಮಾಡಲಾಗಿತ್ತು. 

Neha Hiremath murder: 2024ರ ಎಪ್ರಿಲ್ 18 ರಂದು ಹುಬ್ಬಳ್ಳಿಯ ವಿದ್ಯಾನಗರದ ಬಿವಿಬಿ ಇಂಜಿನಿಯರಿಂಗ್ ಕಾಲೇಜ್‌ನಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯ ಮತ್ತು ಕಾಂಗ್ರೆಸ್ ಮುಖಂಡ ನಿರಂಜನ ಹಿರೇಮಠ ಅವರ ಮಗಳು ನೇಹಾಳನ್ನ ಬರ್ಬರವಾಗಿ ಕೊಲೆ ಮಾಡಲಾಗಿತ್ತು.

Sponsored

ಇದೀಗ ಹುಬ್ಬಳ್ಳಿಯ (Hubballi) ನೇಹಾ ಹಿರೇಮಠ (Neha Hiremath murder) ಹತ್ಯೆ ಪ್ರಕರಣ ಮತ್ತೆ ಮುನ್ನಲೆಗೆ ಬಂದಿದೆ. ಮುಖ್ಯವಾಗಿ ನೇಹಾ ಹಿರೇಮಠ ಹಂತಕನಿಗೆ ಶಿಕ್ಷೆಯಾಗಿಲ್ಲ. 120 ದಿನಗಳಲ್ಲಿ ನೇಹಾಳ ಸಾವಿಗೆ ನ್ಯಾಯ ಕೊಡಿಸುವ ಭರವಸೆಯನ್ನು ರಾಜ್ಯ ಸರ್ಕಾರ ನೀಡಿತ್ತು. ಆದರೆ, ಕೊಲೆ ಆಗಿ 9 ತಿಂಗಳು ಕಳೆದರೂ ಇದುವರೆಗೆ ನ್ಯಾಯ ದೊರೆತಿಲ್ಲ. ಒಟ್ಟಿನಲ್ಲಿ ನೇಹಾ ಕೊಲೆ ಹಿಂದೆ ಶಾಸಕರ ಕೈವಾಡವಿದೆ. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು. ನನ್ನ ಮಗಳ ಆತ್ಮಕ್ಕೆ ಶಾಂತಿ ಸಿಗಬೇಕು ಎಂದು ನೇಹಾಳ ತಂದೆ ನಿರಂಜನ್​ ಹಿರೇಮಠ ಆಗ್ರಹಿಸಿದ್ದಾರೆ.

ಮಾಹಿತಿ ಪ್ರಕಾರ, ಪ್ರೀತಿ ನಿರಾಕರಿಸಿದ್ದಕ್ಕೆ ಆರೋಪಿ ಫಯಾಜ್ ನೇಹಾಳನ್ನು ಕೊಲೆ ಮಾಡಿದ್ದನು. ಕೊಲೆ‌ ಮಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.

ಕೊಲೆ ಆರೋಪಿ ಫಯಾಜ್​ನನ್ನು ಕೆಲವೇ ಕ್ಷಣಗಳಲ್ಲಿ ಪೊಲೀಸರು ಬಂಧಿಸಿದ್ದರು. ನೇಹಾಳ ಕೊಲೆ ಖಂಡಿಸಿ ಅನೇಕ ಸಂಘಟನೆಗಳು ಬೀದಿಗಿಳಿದು ಹೋರಾಟ ಮಾಡಿದ್ದವು. ಪಾಸ್ಟ್‌ಟ್ರ್ಯಾಕ್ ನಿರ್ಮಿಸಿ 120 ದಿನಗಳಲ್ಲಿಯೇ ನೇಹಾಳ ಸಾವಿಗೆ ನ್ಯಾಯ ದೊರಕಿಸಿಕೊಡುವ ಬರವಸೆ ನೀಡಿತ್ತು. ಆದರೆ, ಇಲ್ಲಿಯವರೆಗೂ ಈ ಪ್ರಕರಣದಲ್ಲಿ ಯಾವುದೇ ಬೆಳವಣಿಗೆ ಕಂಡಿಲ್ಲ ಮತ್ತು ಪಾಸ್ಟ್‌ಟ್ರ್ಯಾಕ್ ಕೋರ್ಟ್ ನಿರ್ಮಾಣವಾಗಿಲ್ಲ. ಹೀಗಾಗಿ ನೇಹಾ ಹತ್ಯೆ ಪ್ರಕರಣವನ್ನ ಸಿಬಿಐಗೆ ವಹಿಸಬೇಕೆಂದು ನೇಹಾ ತಂದೆ ನಿರಂಜನ್​ ಹುಬ್ಬಳ್ಳಿಯಲ್ಲಿ ಮಾಧ್ಯಮ ಮೂಲಕ ಹೇಳಿದ್ದಾರೆ.