ಶನಿವಾರ, 7 ನವೆಂಬರ್ 2026

Vinay Kulakarni : ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ – ಕೋರ್ಟ್ ನಿಂದ ಮಹತ್ವದ ತೀರ್ಪು!!

Advertisement
Advertisement

Vinay Kulakarni : ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬಿಗ್ ಶಾಕ್ ನೀಡಿದ್ದು ಒಳಸಂಚು ಆರೋಪದ ಹಿನ್ನೆಲೆ ವಿನಯ್ ಕುಲಕರ್ಣಿ ಅಪರಾಧಿ ಎಂದು ತೀರ್ಪು ಪ್ರಕಟಿಸಿದೆ. ಹೀಗಾಗಿ ವಿನಯ್ ಕುಲಕರ್ಣಿ ಮತ್ತೆ ಪರಪ್ಪನ ಅಗ್ರಹಾರ ಪಾಲಾಗಿದ್ದಾರೆ. ಈ ಬೆನ್ನಲ್ಲೇ  ನ್ಯಾಯಾಲಯವು ವಿನಯ್ ಕುಲಕರ್ಣಿ ಸೇರಿದಂತೆ 16 ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್ನು ಪ್ರಕಟಿಸಿದೆ.

Sponsored

ಬುಧವಾರವಷ್ಟೇ ವಿನಯ್ ಕುಲಕರ್ಣಿ ಸೇರಿದಂತೆ 17 ಮಂದಿಯನ್ನು ನ್ಯಾಯಾಲಯ ಅಪರಾಧಿಗಳು ಎಂದು ಘೋಷಿಸಿತ್ತು. ಗುರುವಾರ ಶಿಕ್ಷೆಯ ಪ್ರಮಾಣದ ಬಗ್ಗೆ ಸುದೀರ್ಘ ವಾದ-ಪ್ರತಿವಾದ ಆಲಿಸಿದ್ದ ನ್ಯಾಯಾಧೀಶರಾದ ಸಂತೋಷ್‌ ಗಜಾನನ ಭಟ್‌ ಅವರು ಇಂದು ಜೀವಾವಧಿ ಶಿಕ್ಷೆ ಆದೇಶ ನೀಡಿದ್ದಾರೆ.

Advertisement
Advertisement

ಶಾಸಕ ಸ್ಥಾನಕ್ಕೆ ಕುತ್ತು

Advertisement

ಜನಪ್ರತಿನಿಧಿಗಳ ಕಾಯ್ದೆಯ ಅನ್ವಯ, ಯಾವುದೇ ಹಾಲಿ ಶಾಸಕ ಅಥವಾ ಸಂಸದನಿಗೆ 2 ವರ್ಷ ಅಥವಾ ಅದಕ್ಕಿಂತ ಹೆಚ್ಚು ಅವಧಿಯ ಜೈಲು ಶಿಕ್ಷೆಯಾದರೆ, ಅವರು ತಕ್ಷಣವೇ ತಮ್ಮ ಸ್ಥಾನವನ್ನು ಕಳೆದುಕೊಳ್ಳುತ್ತಾರೆ. ಇದೀಗ ವಿನಯ್ ಕುಲಕರ್ಣಿಗೆ ಶಿಕ್ಷೆ ಪ್ರಕಟವಾಗಿರುವುದರಿಂದ, ಅವರು ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನದಿಂದ ಅನರ್ಹಗೊಳ್ಳುವುದು ಖಚಿತವಾಗಿದೆ

Advertisement
Advertisement