Home News ಮಂಗಳೂರು: ಪೊಲೀಸ್ ಹುತಾತ್ಮರ ದಿನಾಚರಣೆ

ಮಂಗಳೂರು: ಪೊಲೀಸ್ ಹುತಾತ್ಮರ ದಿನಾಚರಣೆ

Hindu neighbor gifts plot of land

Hindu neighbour gifts land to Muslim journalist

ಮಂಗಳೂರು ನಗರ ಪೊಲೀಸ್ ಆಯುಕ್ತಾಲಯ, ದ.ಕ. ಜಿಲ್ಲಾ ಪೊಲೀಸ್ ಇಲಾಖೆ, ಕೆಎಸ್ಸಾರ್ಪಿ 7ನೆ ಪಡೆ ಮಂಗಳೂರು ಘಟಕ ಇದರ ಸಹಯೋಗದಲ್ಲಿ ಗುರುವಾರ ದ.ಕ. ಜಿಲ್ಲಾ ಸಶಸ್ತ್ರ ಮೀಸಲು ಪೊಲೀಸ್ ಪಡೆ ಕಚೇರಿಯ ಆವರಣದಲ್ಲಿ ಪೊಲೀಸ್ ಹುತಾತ್ಮರ ದಿನ ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಕಾನೂನು ಸುವ್ಯವಸ್ಥೆ ಅನುಷ್ಠಾನಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುವ ಪೊಲೀಸರು ಕೋವಿಡ್ ಸಂಕಷ್ಟ ಕಾಲದಲ್ಲಿ ಜಿಲ್ಲಾಡಳಿತಕ್ಕೆ ಬೆನ್ನೆಲುಬಾಗಿ ನಿಂತಿದ್ದರು. ಪೊಲೀಸ್ ಇಲಾಖೆಯು ಜಿಲ್ಲಾಡಳಿತಕ್ಕೆ ಶಕ್ತಿ ಇದ್ದಂತೆ. ಪೊಲೀಸರ ಶ್ರಮವನ್ನು ಮೆಚ್ಚಲೇಬೇಕಿದೆ ಎಂದರು.

ಕಾರ್ಯಕ್ರಮದಲ್ಲಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರೇ, ಪೊಲೀಸ್ ಕಮಿಷನರ್ ಶಶಿಕುಮಾರ್ ಎನ್, ದ.ಕ. ಜಿಲ್ಲಾ ಎಸ್ಪಿ ಸೋನಾವಣೆ ಋಷಿಕೇಶ್ ಭಗವಾನ್, ಡಿಸಿಪಿಗಳಾದ ಹರಿರಾಂ ಶಂಕರ್, ಬಿ.ಪಿ.ದಿನೇಶ್ ಕುಮಾರ್, ಮೀಸಲು ಪೊಲೀಸ್ ಪಡೆಯ ಕಮಾಂಡೆಂಟ್ ಬಿಎಂ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.