# ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ಎನ್‌ಡಿಎ ಸಭೆಯಲ್ಲಿ ಮೋದಿ ಮಹತ್ವದ ಮಾಹಿತಿ

- Link: https://hosakannada.com/news/modi-shares-key-information-regarding-the-question-paper-leak-at-the-nda-meeting/
- Published: 2026-07-21T11:30:56+00:00
- Author: ಹೊಸಕನ್ನಡ ನ್ಯೂಸ್

ಮಂಗಲ್‌ ಮಿಲನ್‌ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೀಟ್‌ ಮತ್ತು ಇತರ ಪರೀಕ್ಷೆಗಳ ಪ್ರಶ್ನೆಪತ್ರಿಕೆ
ಸೋರಿಕೆ ವಿವಾದದ ಕುರಿತು ಗಂಭೀರವಾಗಿ ಮಾತನಾಡಿದ್ದಾರೆ. ದೇಶದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯನ್ನು
ತಡೆಗಟ್ಟುವುದು ಸರಕಾರದ ಕರ್ತವ್ಯವಲ್ಲ ಅದೊಂದು ರಾಷ್ಟ್ರೀಯ ಜವಾಬ್ದಾರಿ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

Sponsored

ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿರುವ ಅಪರಾಧಿಗಳಿಗೆ ಯಾವುದೇ ಕಾರಣಕ್ಕೂ ವಿನಾಯಿತಿ ನೀಡಬಾರದು ಎಂದು
ಪ್ರಧಾನಿ ಹೇಳಿದ್ದು, ಪರೀಕ್ಷಾ ಪ್ರಕ್ರಿಯೆಯನ್ನು ಕಲುಷಿತ ಮಾಡಿ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದ
ಜೊತೆ ಆಟವಾಡಿರುವ ಕಿಡಿಗೇಡಿಗಳಿಗೆ ಕಾನೂನಿನಡಿಯಲ್ಲಿ ಸಿಗಬಹುದಾದ ಅತ್ಯಂತ ಕಠಿಣ ಶಿಕ್ಷೆಯನ್ನು ವಿಧಿಸಬೇಕು
ಎಂದು ಪ್ರಧಾನಿ ಮೋದಿ ಸೂಚಿಸಿದ್ದಾರೆ.

Advertisement

Advertisement

ರಾಜಕೀಯ ಭಿನ್ನಾಭಿಪ್ರಾಯಗಳು ಏನೇ ಇರಲಿ, ದೇಶದ ಭವಿಷ್ಯ ಮತ್ತು ಯುವಜನತೆಯ ಕಲ್ಯಾಣಕ್ಕಾಗಿ ಕೆಲಸ ಮಾಡುವ
ಜವಾಬ್ದಾರಿ ಪ್ರತಿಯೊಬ್ಬ ಸಂಸದರ ಮೇಲಿದೆ. ಶಾಸಕಾಂಗ ವ್ಯವಹಾರಗಳನ್ನು ಬೆಂಬಲಿಸಲು ಎನ್‌ಡಿಎ ಮೈತ್ರಿಕೂಟದ
ಎಲ್ಲಾ ನಾಯಕರು ಒಗ್ಗಟ್ಟಿನಿಂದ ಇರಬೇಕು. ಹಾಗೆಯೇ ಸಂಸತ್ತಿನಲ್ಲಿ ವಿರೋಧ ಪಕ್ಷಗಳು ಸಹ ಗದ್ದಲ ಎಬ್ಬಿಸದೆ
ರಚನಾತ್ಮಕವಾಗಿ ದೇಶದ ಹಿತದೃಷ್ಟಿಯಿಂದ ಭಾಗವಹಿಸಬೇಕು” ಎಂದು ಪ್ರಧಾನಿ ಮೋದಿ ಆಶಿಸಿದ್ದಾರೆ.

Advertisement
