ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಅವರ ಎರಡನೇ ವಿವಾಹ ಕೊಡಗಿನ ಪ್ರತಿಷ್ಠಿತ ರೆಸಾರ್ಟ್ನಲ್ಲಿ ನಡೆಯಲಿದೆ.
ಆ. 15 ರಿಂದ 20 ರವರೆಗೆ ಮಡಿಕೇರಿ ಹೊರವಲಯದ ಮೇಕೇರಿ ಗ್ರಾಮದಲ್ಲಿರುವ ಮಾಜಿ ಸಚಿವ ಟಿ.ಜಾನ್ ಕುಟುಂಬಸ್ಥರ ಒಡೆತನದ ವೈಲ್ಡರೆಸ್ಟ್ ರೆಸಾರ್ಟ್ನಲ್ಲಿ ಮದುವೆ ನಡೆಯಲಿದೆ.
ಆ.16 ರಂದು ಮಧ್ಯಾಹ್ನ 12 ಗಂಟೆಗೆ ನಿಕಾಹ್ ನಡೆಯಲಿದೆ. ಸಿಎಂ ಡಿಕೆ ಶಿವಕುಮಾರ್, ಕೇರಳ ಮುಖ್ಯಮಂತ್ರಿ ಸತೀಶನ್, ನಟರಾದ ಸುದೀಪ್, ಯಶ್ ಸೇರಿ ಹಲವು ಗಣ್ಯರು ಈ ಮದುವೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ವರದಿಯಾಗಿದೆ.
2017 ರಲ್ಲಿ ಸಮೀನ್ ಅವರನ್ನು ವಿವಾಹವಾಗಿದ್ದ ಅವರು ಇದೀಗ ಎರಡನೇ ವಿವಾಹವಾಗುತ್ತಿದ್ದಾರೆ. ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಹಾಗೂ ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಸ್ ಐ ಮುನೀರ್ ಅಹಮ್ಮದ್ ಅವರ ಮೂರನೇ ಪುತ್ರಿ ಮಲಿಹಾ ಫಾತಿಮಾ ಅವರನ್ನು ಇದೀಗ ವಿವಾಹವಾಗಲಿದ್ದಾರೆ.



