ಭಾನುವಾರ, 25 ಅಕ್ಟೋಬರ್ 2026
Trending

ಮೊರಾರ್ಜಿ ದೇಸಾಯಿ ಹಾಗೂ ಇತರ ವಸತಿ ಶಾಲೆಗೆ ಸೇರಲಿಚ್ಛಿಸುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ !! | 6 ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಸಮಾಜ ಕಲ್ಯಾಣ ಇಲಾಖೆಯು 2022-23 ನೇ ಸಾಲಿಗೆ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಡಾ.ಬಿ.ಆರ್. ಅಂಬೇಡ್ಕರ್, ಇಂದಿರಾ ಗಾಂಧಿ ಹಾಗೂ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗಳಿಗೆ 6 ನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಫೆಬ್ರವರಿ 28 ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.

Sponsored

ವಿದ್ಯಾರ್ಥಿಯ ಎಸ್.ಎ.ಟಿ.ಎಸ್ ನಂಬರ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಆಧಾರ ಕಾರ್ಡ್, ಪಡಿತರ ಚೀಟಿಯ ಝೆರಾಕ್ಸ್ ಹಾಗೂ ವಿದ್ಯಾರ್ಥಿಯ ಇತ್ತೀಚಿನ ಭಾವಚಿತ್ರ ದಾಖಲೆಗಳೊಂದಿಗೆ ಹತ್ತಿರದ ವಸತಿ ಶಾಲೆಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್‍ಸೈಟ್ http://kea.kar.nic.in ಹಾಗೂ http://http://kreis.kar.nic.in ಅಥವಾ ದೂರವಾಣಿ ಸಂಖ್ಯೆ 0836-2447201 ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.