ಭಾನುವಾರ, 25 ಅಕ್ಟೋಬರ್ 2026

ವಾಹನ ಸವಾರರು ಸೆ. 25 ರೊಳಗೆ ಈ ಕೆಲಸ ಮಾಡದಿದ್ರೆ ಡ್ರೈವಿಂಗ್ ಲೈಸೆನ್ಸ್ ರದ್ದು

ದೇಶಾದ್ಯಂತ ವಾಹನ ಸವಾರರು ಕಡ್ಡಾಯವಾಗಿ ಈ ಒಂದು ಕೆಲಸವನ್ನು ಮಾಡದಿದ್ದರೆ ಸೆಪ್ಟೆಂಬರ್ 25 ಬಳಿಕ ನಿಮ್ಮ ಲೈಸೆನ್ಸ್ ರದ್ದಾಗಲಿದೆ ಎಂದು ಸಾರಿಗೆ ಇಲಾಖೆ ತಿಳಿಸಿದೆ.

Sponsored

ಹೌದು, ವಾಹನ ಸವಾರರು ತಮ್ಮ ಡ್ರೈವಿಂಗ್ ಲೈಸೆನ್ಸ್‌ಗೆ ಸಕ್ರಿಯ ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ಲಿಂಕ್  ಮಾಡಿಕೊಳ್ಳಬೇಕೆಂದು ಕೇಂದ್ರ ಸಾರಿಗೆ ಇಲಾಖೆ ಸೂಚಿಸಿದೆ. ಸೆಪ್ಟೆಂಬರ್ 25ರೊಳಗೆ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸದಿದ್ದರೆ ಡ್ರೈವಿಂಗ್ ಲೈಸೆನ್ಸ್ ರದ್ದಾಗಲಿದೆಯಂತೆ!

Marriage AdMarriage AdSponsored

ಹಳೆಯ ಡ್ರೈವಿಂಗ್ ಲೈಸೆನ್ಸ್‌ಗಳಲ್ಲಿ ಮೊಬೈಲ್ ಸಂಖ್ಯೆ ನಮೂದಿಸದಿರುವುದು ಹಾಗೂ ಕೆಲವರಲ್ಲಿ ಚಾಲ್ತಿಯಲ್ಲಿಲ್ಲದ ಸಂಖ್ಯೆಗಳಿರುವುದರಿಂದ ಇ-ಚಲನ್ ಮತ್ತು ಸಾರಿಗೆ ನಿಯಮ ಉಲ್ಲಂಘನೆಯ ನೋಟಿಫಿಕೇಶನ್‌ಗಳು ಸವಾರರಿಗೆ ತಲುಪಲು ಸಾಧ್ಯವಾಗುತ್ತಿಲ್ಲ. ಅಲ್ಲದೆ, ವಾಹನ ತಪಾಸಣೆ ವೇಳೆಯೂ ಸಂಚಾರ ಪೊಲೀಸರಿಗೆ ಸಾಕಷ್ಟು ತೊಂದರೆಯಾಗುತ್ತಿದ್ದು, ಇದನ್ನು ಸರಿಪಡಿಸಲು ಸಾರಿಗೆ ಇಲಾಖೆ ಮೊಬೈಲ್ ಸಂಖ್ಯೆ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಿದೆ.

ಹೇಗೆ ಮಾಡುವುದು?

ಮೊಬೈಲ್ ಅಥವಾ ಕಂಪ್ಯೂಟರ್ ಮೂಲಕ ಉಚಿತವಾಗಿ ಸಾರಥಿ ಪರಿವಾಹನ್ ಪೋರ್ಟಲ್‌ಗೆ ಭೇಟಿ ನೀಡಿ. ಅಲ್ಲಿ ನಿಮ್ಮ ರಾಜ್ಯವನ್ನು ಆಯ್ಕೆ ಮಾಡಿಕೊಂಡು, ‘Others Menu’ನಲ್ಲಿರುವ ‘Mobile Number Update’ ವಿಭಾಗದಲ್ಲಿ ಲೈಸೆನ್ಸ್ ವಿವರ ಹಾಗೂ ಜನ್ಮ ದಿನಾಂಕ ನಮೂದಿಸಿ ಸುಲಭವಾಗಿ ಹೊಸ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಬಹುದು. ಸವಾರರು ಈ ಕುರಿತು ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಿ, ಯಾವುದೇ ತೊಂದರೆಯಾಗದಂತೆ ತಕ್ಷಣವೇ ತಮ್ಮ ಮೊಬೈಲ್ ಸಂಖ್ಯೆಯನ್ನು ಅಪ್‌ಡೇಟ್ ಮಾಡಿಕೊಳ್ಳುವುದು ಉತ್ತಮ