Home News MUDA Case: ಸಿಎಂ ಸಿದ್ದರಾಮಯ್ಯ ವಿರುದ್ಧ ಕೊನೆಗೂ FIR ದಾಖಲು

MUDA Case: ಸಿಎಂ ಸಿದ್ದರಾಮಯ್ಯ ವಿರುದ್ಧ ಕೊನೆಗೂ FIR ದಾಖಲು

MUDA Scam case

Hindu neighbor gifts plot of land

Hindu neighbour gifts land to Muslim journalist

Lokayukta: ಮೂಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ದಲ್ಲಿ ನಡೆದಿರುವ ಹಗರಣಕ್ಕೆ ಕುರಿತಂತೆ ಕೊನೆಗೂ ಸಿದ್ದರಾಯ್ಯ ಅವರ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯವು ತನಿಖೆಗೆ ಮೈಸೂರು ಲೋಕಾಯುಕ್ತಕ್ಕೆ ಆದೇಶ ನೀಡಿದೆ.

ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಆದೇಶ ನೀಡಿದಂತೆ ಲೋಕಾಯುಕ್ತ ಎಡಿಜಿಪಿ ಮನೀಶ್‌ ಖರ್ಬೀಕರ್‌ ಸೂಚನೆ ಮೇರೆಗೆ ಮೈಸೂರು ಲೋಕಾಯುಕ್ತ ಎಸ್‌ಪಿ ಉದೇಶ್‌ ಅವರ ನೇತೃತ್ವದಲ್ಲಿ ಎಫ್‌ಐಆರ್‌ ದಾಖಲು ಮಾಡಲಾಗಿದೆ. ಸಿಆರ್‌ಪಿಸಿ ಕಾಯ್ದೆಯಡಿಯಲ್ಲಿ ಸಿದ್ದರಾಮಯ್ಯ ವಿರುದ್ಧ 156(3) ರ ಹಲವು ಸೆಕ್ಷನ್‌ ಅಡಿಯಲ್ಲಿ ಎಫ್‌ಐಆರ್‌ ದಾಖಲು ಮಾಡಲಾಗಿದೆ.

ಐಪಿಸಿ ಸೆಕ್ಷನ್​ 120 ಬಿ, 166, 403, 420, 426, 465, 468, 340, 351 ಅಡಿ ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಕರ್ನಾಟಕ ಭೂಮಿ ಕಬಳಿಕೆ ನಿಷೇಧ ಕಾಯ್ದೆ 2011ರ ಅನ್ವಯ ಪ್ರಕರಣ ಕೂಡಾ ದಾಖಲಾಗಿದೆ. ಭ್ರಷ್ಟಾಚಾರ ತಡೆ ಕಾಯ್ದೆ 1988 , ಬೇನಾಮಿ ಆಸ್ತಿ ವಹಿವಾಟು ಕಾಯ್ದೆ 1988, ಸೆಕ್ಷನ್​ 120 ಬಿ ಕ್ರಿಮಿನಲ್ ಪಿತೂರಿ, ಸೆ, 166 ಸಾರ್ವಜನಿಕ ಸೇವಕ‌ ಕಾನೂನು ಉಲ್ಲಂಘನೆ ಮಾಡುವುದು, ಸೆ 403 ಆಸ್ತಿಯ ದುರ್ಬಳಕೆ, ಸೆ 406 ನಂಬಿಕೆಯ ಉಲ್ಲಂಘನೆ, ಸೆ 420 ವಂಚನೆ, ಸೆ 426 ದುಷ್ಕೃತ್ಯವೆಸಗುವುದು, ಸೆ 465 ಪೋರ್ಜರಿ, ಸೆ 468 ವಂಚನೆ ಉದ್ದೇಶಕ್ಕಾಗಿ ದಾಖಲೆಗಳ ಪೋರ್ಜರಿ, ಸೆ 340 ಅಕ್ರಮ ಬಂಧನ, ಸೆ 351 ಇತರರಿಗೆ ಹಾನಿಯನ್ನುಂಟು ಮಾಡುವುದು.

ಈ ಕೇಸಿನಲ್ಲಿ ಸಿಎಂ ಸಿದ್ದರಾಮಯ್ಯ ಎ1 ಆರೋಪಿ, ಪತ್ನಿ ಪಾರ್ವತಿ ಎ2 ಆರೋಪಿ, ಬಾಮೈದಾ ಮಲ್ಲಿಕಾರ್ಜುನ ಎ3, ಭೂಮಾಲೀಕ ದೇವರಾಜು ಎ4 ಹಾಗೂ ಇತರರು ಎ5 ಆರೋಪಿಗಳು ಎಂದು ಎಫ್‌ಐಆರ್‌ನಲ್ಲಿ ದಾಖಲು ಮಾಡಲಾಗಿದೆ.