Home News Multinational Company: ಕುಲಾಂತರಿ ಆಹಾರ ಮತ್ತು ಬಹುರಾಷ್ಟ್ರೀಯ ಕಂಪನಿಗಳ ಹಿಡಿತ! ಕೃಷಿ ಕ್ಷೇತ್ರದಿಂದ ಬಹಿಷ್ಕಾರ ಅಗತ್ಯ!

Multinational Company: ಕುಲಾಂತರಿ ಆಹಾರ ಮತ್ತು ಬಹುರಾಷ್ಟ್ರೀಯ ಕಂಪನಿಗಳ ಹಿಡಿತ! ಕೃಷಿ ಕ್ಷೇತ್ರದಿಂದ ಬಹಿಷ್ಕಾರ ಅಗತ್ಯ!

Multinational Company

Hindu neighbor gifts plot of land

Hindu neighbour gifts land to Muslim journalist

Multinational Company: ನಮ್ಮ ದೇಶದ ಪಾರಂಪರಿಕ ಕೃಷಿ ಜ್ಞಾನ, ಹಿರಿಮೆ, ದೃಷ್ಠಿಕೋನ, ಆಯಾಮ ಬಹು ವಿಸ್ತಾರವಾದದ್ದು. ಇಂತಹ ಇತಿಹಾಸ ಹೊಂದಿರುವ ದೇಶಕ್ಕೆ “ಕುಲಾಂತರಿ ಆಹಾರವನ್ನು”(Transgenic food) ತರುವುದಕ್ಕೆ ಬಹುರಾಷ್ಟ್ರೀಯ ಕಂಪನಿಗಳು(Multinational Company) ಪಿತೂರಿ ನಡೆಸುತ್ತಿವೆ. ಕುಲಾಂತರಿ ಆಹಾರಗಳ ಮೂಲಕ ಕೃಷಿ(Agriculture) ವಿರೋಧಿ, ಸಮಾಜ ವಿರೋಧಿ, ಸಂಸ್ಕೃತಿ ವಿರೋಧಿ ಮತ್ತು ಪರಿಸರ ವಿರೋಧಿ ಕೃತ್ಯವನ್ನು ನಡಸಲು ಮುಂದಾಗಿವೆ. ಇದು ಜೈವಿಕ ವ್ಯವಸ್ಥೆಯ(Biological system) ಉಲ್ಲಂಘನೆ ಮಾತ್ರವಲ್ಲ, ಇದರಿಂದ ಮಾನವ ಹಕ್ಕುಗಳು, ಪರಿಸರದ ಹಕ್ಕುಗಳು, ಪಂಚಾಯತ್ ಹಕ್ಕುಗಳು ಮತ್ತು ನಮ್ಮ ರೈತರ(Farmer) ಸಾರ್ವಭೌಮತ್ವದ ಹಕ್ಕುಗಳ ಉಲ್ಲಂಘನೆಯೂ ಆಗಿದೆ.

ನಮ್ಮ ಸ್ವದೇಶಿ ಕೃಷಿ ವ್ಯವಸ್ಥೆಯನ್ನು ಹಾಳುಗೆಡವಿ, ಬಹುರಾಷ್ಟ್ರೀಯ ಕಂಪನಿಗಳಿಗೆ ಕುಲಾಂತರಿ ತಳಿ ಬೀಜಗಳು ಮತ್ತು ಆಹಾರೋತ್ಪಾದನೆಗಳ ಮೂಲಕ ಭಾರತದಲ್ಲಿ ವಸಾಹತು ಸ್ಥಾಪನೆ ಮಾಡಲು ಅವಕಾಶ ಮಾಡಿಕೊಡುತ್ತಿರುವ ಭಾರತ ಸರ್ಕಾರದ ನಿರ್ಧಾರವನ್ನು ಖಂಡಿಸಬೇಕಿದೆ. ಅಂದು ಈಸ್ಟ್ ಇಂಡಿಯಾ ಕಂಪನಿ,ಇಂದು ಬಹುರಾಷ್ಟ್ರೀಯ ಕಂಪನಿ..!

ಹೀಗೆ ಮುಂದುವರೆದರೆ, ನಮ್ಮ ಪಾರಂಪರಿಕ ಜ್ಞಾನ, ಹಳ್ಳಿ, ನಮ್ಮ ದನ, ಎಮ್ಮೆ, ಆಡು, ಕುರಿ, ಕೋಳಿ, ಅನ್ನ, ಕಾಳು-ಕಡ್ಡಿ, ಕೂಲಿ-ಕಾರ್ಮಿಕರು, ಅಂಗಡಿ-ಮುಂಗಟ್ಟು, ಇತ್ಯಾದಿಗಳು ಮಾಯವಾಗಿ ಅವರ ಕೃತಕ ಸರಕುಗಳು, ವಿಷಮಿಶ್ರಿತ ಆಹಾರಗಳು, ವಿಷಪೂರಿತ ನಾಶಕಗಳು, ಮನೆ ಮನೆಗೂ ಬಂದು ನಮ್ಮ ಹಳ್ಳಿಗಳನ್ನು, ಆಹಾರಗಳನ್ನು ಹಾಳುಗೆಡವಿ ನಮ್ಮನ್ನು ನಮ್ಮ ಮಕ್ಕಳನ್ನು, ನಮ್ಮ ಸಮಾಜವನ್ನು ಹಿಂದೆಂದು ಕೇಳರಿಯದಂತಹ ರೋಗಗಳಿಗೆ ತಳ್ಳುತ್ತಾರೆ. ಇದನ್ನರಿತು ನಾವುಗಳು ಒಟ್ಟುಗೂಡಿ, ಕುಲಾಂತರಿ ಆಹಾರ ಮತ್ತು ಬಹುರಾಷ್ಟ್ರೀಯ ಕಂಪನಿಗಳನ್ನು ನಮ್ಮ ಕೃಷಿ ಕ್ಷೇತ್ರಕ್ಕೆ ಕಾಲಿಡದಂತೆ ಬುಡಸಮೇತ ಕಿತ್ತೊಗೆಯಬೇಕಿದೆ.

ಈ ಹೋರಾಟಕ್ಕೆ ಎಲ್ಲರೂ ಕೈ ಜೋಡಿಸಬೇಕಿರುವುದರಿಂದ,2024 ಸೆಪ್ಟಂಬರ್ 29,30 & ಅಕ್ಟೋಬರ್ 01,02 ರಂದು ಗಾಂಧೀಜಿ ಸಹಜ ಬೇಸಾಯ ಆಶ್ರಮ, ದೊಡ್ಡಹೊಸೂರು ಗ್ರಾಮ, ತುಮಕೂರು ಇಲ್ಲಿ ನಡೆಯುವ “ದೊಡ್ಡಹೊಸೂರು ಸತ್ಯಾಗ್ರಹ” ದಲ್ಲಿ ಭಾಗವಹಿಸಿ, ತಮ್ಮ ಬೆಂಬಲವನ್ನು ನೀಡಬೇಕೆಂದು ಕೋರಲಾಗಿದೆ.