Home News Mumbai: ಪ್ರಿಯತಮೆಯನ್ನು ಭೀಕರವಾಗಿ ಕೊಂದು ಪೊದೆಗೆಸೆದ ಪಾಪಿ ಪ್ರೇಮಿ – ಕಾರಣವೇನು?

Mumbai: ಪ್ರಿಯತಮೆಯನ್ನು ಭೀಕರವಾಗಿ ಕೊಂದು ಪೊದೆಗೆಸೆದ ಪಾಪಿ ಪ್ರೇಮಿ – ಕಾರಣವೇನು?

Hindu neighbor gifts plot of land

Hindu neighbour gifts land to Muslim journalist

Mumbai: ಕೆಲವು ದಿನಗಳ ಹಿಂದಷ್ಟೇ ಪ್ರೀತಿಸಿದ ಯುವತಿ ಮದುವೆಯಾಗು ಎಂದು ಪೀಡಿಸಿದ್ದಕ್ಕಾಗಿ ಪ್ರಿಯತಮನೇ ಆಕೆಯನ್ನು ಬರ್ಬರವಾಗಿ ಕೊಂದ ಘಟನೆ ಶಿವಮೊಗ್ಗದಲ್ಲಿ ನಡೆದಿತ್ತು. ಇದೀಗ ಇಂತದ್ದೇ ಒಂದು ಪ್ರಕರಣ ಮುಂಬೈನಲ್ಲಿ ಬೆಳಕಿಗೆ ಬಂದಿದೆ.

ಹೌದು, ಮುಂಬೈನಲ್ಲಿ 20ರ ಹರೆಯದ ಯುವತಿಯೊಬ್ಬಳನ್ನು ಆಕೆಯ ಪ್ರಿಯಕರನೇ (Lover) ಬರ್ಬರವಾಗಿ ಇರಿದು ಕೊಂದು, ಆಕೆಯ ಶವವನ್ನು ರೈಲ್ವೆ ನಿಲ್ದಾಣದ (Railway Station) ಬಳಿಯ ಪೊದೆಯಲ್ಲಿ ಎಸೆದಿರುವ ಘಟನೆ (Mumbai) ನಡೆದಿದೆ. ಕೊಲೆಯಾದ ಯುವತಿಯನ್ನು ಯಶಶ್ರೀ ಶಿಂಧೆ ಎಂದು ಗುರುತಿಸಲಾಗಿದೆ ಅಂದಹಾಗೆ ಯಶಶ್ರೀಯು ನಾಪತ್ತೆಯಾಗಿದ್ದಾಳೆ ಎಂದು ದೂರು ದಾಖಲಾಗಿತ್ತು. ಈಕೆ ಊರನ್ ನಿವಾಸಿಯಾಗಿದ್ದು, ಸುಮಾರು 25 ಕಿ.ಮೀ ದೂರದ ಬೇಲಾಪುರದಲ್ಲಿ ಕೆಲಸ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ.

ಘಟನೆಯ ಕುರಿತು ಉಪ ಪೊಲೀಸ್ ಆಯುಕ್ತ (ನವಿ ಮುಂಬೈ) ವಿವೇಕ್ ಪನ್ಸಾರೆ ಪ್ರತಿಕ್ರಿಯಿಸಿ, ಉರಾನ್ ರೈಲು ನಿಲ್ದಾಣದ ಬಳಿಯ ಪೊದೆಯಲ್ಲಿ ಯುವತಿಯ ಮೃತದೇಹ ಪತ್ತೆಯಾಗಿದೆ ಎಂದು ಬೆಳಗಿನ ಜಾವ 2 ಗಂಟೆಯ ಸುಮಾರಿಗೆ ಪೊಲೀಸರಿಗೆ ಕರೆ ಬಂದಿತ್ತು. ಆಕೆಯ ಮೃತದೇಹ ಅನೇಕ ಗಾಯದ ಗುರುತುಗಳು ಮತ್ತು ಇರಿತದ ಗಾಯಗಳನ್ನು ಒಳಗೊಂಡಿದೆ. ಇದು ಆಕೆಯನ್ನು ಅತ್ಯಂತ ಬರ್ಬರವಾಗಿ ಹತ್ಯೆಗೈಯಲಾಗಿದೆ ಎಂದು ಸೂಚಿಸುತ್ತದೆ ಅಲ್ಲದೆ ಪ್ರೀತಿ ವಿಚಾರವಾಗಿ ಕೊಲೆ ಮಾಡಲಾಗಿದೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಘಟನೆಯ ಬಳಿಕ ಪ್ರಿಯಕರ ಕೂಡ ನಾಪತ್ತೆಯಾಗಿದ್ದಾನೆ. ಈ ಕುರಿತು ಕೊಲೆ ಪ್ರಕರಣವನ್ನು ದಾಖಲಿಸಲಾಗಿದೆ. ಸದ್ಯದಲ್ಲೇ ಆರೋಪಿ ಪತ್ತೆ ಮಾಡುತ್ತೇವೆ ಎಂದು ಹೇಳಿದ್ದಾರೆ.