ಭಾನುವಾರ, 25 ಅಕ್ಟೋಬರ್ 2026
Trending

ಅಕ್ಟೋಬರ್‌ 11 ರಂದು ಮೈಸೂರು ದಸರಾ ಉದ್ಘಾಟನೆ!!

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ ಫಿಕ್ಸ್‌ ಆಗಿದೆ. ಅಕ್ಟೋಬರ್‌ 11 ರಂದು ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆಯಾಗಲಿದೆ.

Sponsored

ವಿಧಾನಸೌಧದ ಸಮ್ಮೇಳನ ಸಭಾಗಂಣದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನಡೆದ ಮೈಸೂರು ದಸರಾ ಕುರಿತ ಸಭೆಯಲ್ಲಿ ಮೈಸೂರು ದಸರಾ ಮಹೋತ್ಸವ ಹಾಗೂ ಜಂಬೂಸವಾರಿಗೆ ದಿನಾಂಕ ನಿಗದಿಪಡಿಸಲಾಯಿತು.

ಆಗಸ್ಟ್ 26ರಂದು ಮೈಸೂರು ಅರಮನೆ ಪ್ರವೇಶ ದ್ವಾರದಲ್ಲಿ ಗಜಪಡೆಗೆ ಪೂಜೆ ಸಲ್ಲಿಸಲಾಗುತ್ತದೆ. ಅಕ್ಟೋಬರ್ 11ರಂದು ಬೆಳಿಗ್ಗೆ 11:50ಕ್ಕೆ ಚಾಮುಂಡಿ ಬೆಟ್ಟದಲ್ಲಿ ಮೈಸೂರು ದಸರಾ ಉದ್ಘಾಟನೆ ನಡೆಯಲಿದೆ. ಅಕ್ಟೋಬರ್ 21ರ ಸಂಜೆ 4:10ರಿಂದ 4:35ರ ನಡುವೆ ಅಂಬಾರಿಯಲ್ಲಿರುವ ಚಾಮುಂಡೇಶ್ವರಿ ತಾಯಿಗೆ ಪುಷ್ಪಾರ್ಚನೆ ನೆರವೇರಲಿದೆ. ಅಕ್ಟೋಬರ್ 21ರಂದು ವಿಶ್ವವಿಖ್ಯಾತ ಜಂಬೂಸವಾರಿ ನಡೆಯಲಿದೆ ಎಂದು ತಿಳಿದುಬಂದಿದೆ.

ದಸರಾ ಉದ್ಘಾಟಕರನ್ನು ನಿರ್ಣಯಿಸುವ ಅಧಿಕಾರ ಸಿಎಂ ನೀಡುವ ಸಾಧ್ಯತೆ ಇದೆ. ಬುಕರ್‌ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್‌ ಅವರು ಕಳೆದ ವರ್ಷ ದಸರಾ ಉದ್ಘಾಟನೆ ಮಾಡಿದ್ದರು.