Home News ನಂದಿನಿ ಹಾಲಿನ ಉತ್ಪನ್ನಗಳನ್ನು ಗರಿಷ್ಠ ಮಾರಾಟ ದರಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡಿದರೆ ಡೀಲರ್‌ಶಿಪ್ ರದ್ದು-ಹಾಲು...

ನಂದಿನಿ ಹಾಲಿನ ಉತ್ಪನ್ನಗಳನ್ನು ಗರಿಷ್ಠ ಮಾರಾಟ ದರಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡಿದರೆ ಡೀಲರ್‌ಶಿಪ್ ರದ್ದು-ಹಾಲು ಒಕ್ಕೂಟದ ಆದೇಶ

Hindu neighbor gifts plot of land

Hindu neighbour gifts land to Muslim journalist

ನಂದಿನಿ ಹಾಲಿನ ಡೀಲರುಗಳು ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಗರಿಷ್ಟ ಮಾರಾಟ ದರಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿರುವುದು ಕಂಡು ಬಂದಲ್ಲಿ ಡೀಲರ್‌ಶಿಪ್ ರದ್ದು ಪಡಿಸಲಾಗುವುದು ಎಂದು ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ಮಾರುಕಟ್ಟೆ ವ್ಯವಸ್ಥಾಪಕರು ಆದೇಶಿಸಿದ್ದಾರೆ.

ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಗರಿಷ್ಟ ಮಾರಾಟ ದರಕ್ಕಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡುವುದು ಒಕ್ಕೂಟದೊಂದಿಗೆ ಮಾಡಿಕೊಂಡ ಕರಾರು ಒಪ್ಪಂದದ ಉಲ್ಲಂಘನೆಯಾಗುತ್ತದೆ. ಆದುದರಿಂದ ಕಾನೂನು ಮಾಪನ ಶಾಸ್ತ್ರದ ನಿಯಮದಂತೆ ಗ್ರಾಹಕರಿಗೆ ನಂದಿನಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಗರಿಷ್ಟ ಮಾರಾಟ ದರದಲ್ಲಿ ಮಾರಾಟ ಮಾಡಬೇಕು ತಪ್ಪಿದಲ್ಲಿ ಯಾವುದೇ ಮುನ್ಸೂಚನೆ ನೀಡದೆ ಡೀಲರ್‌ಶಿಪ್ ರದ್ದುಪಡಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.