ರಾಜ್ಯದಲ್ಲಿ ನಾಳೆ (ಅ 2) ಇಂದಲೇ ನಂದಿನಿ ಹಾಲಿನ ದರ ಶೀಘ್ರದಲ್ಲೇ ಪರಿಷ್ಕರಣೆಯಾಗುವ ಸಾಧ್ಯತೆಯಿದ್ದು, ಲೀಟರ್‌ಗೆ 5ರಿಂದ 6 ರೂಪಾಯಿಗಳವರೆಗೆ ಬೆಲೆ ಏರಿಕೆಯಾಗುವ ನಿರೀಕ್ಷೆಯಿದೆ.
ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತರೆ, ಅಕ್ಟೋಬರ್ 2ರಿಂದಲೇ (ನಾಳೆಯಿಂದಲೇ) ನೂತನ ದರಗಳು ರಾಜ್ಯಾದ್ಯಂತ ಜಾರಿಗೆ ಬರಲಿವೆ.
ಹಾಲು ಉತ್ಪಾದಕರ ಹಿತರಕ್ಷಣೆಯ ದೃಷ್ಟಿಯಿಂದ ಹಲವು ಜಿಲ್ಲಾ ಹಾಲು ಒಕ್ಕೂಟಗಳು ಲೀಟರ್‌ಗೆ ₹10ರಿಂದ ₹12ರವರೆಗೆ ದರ ಹೆಚ್ಚಿಸುವಂತೆ ಮನವಿ ಮಾಡಿದ್ದವು. ಪ್ರಸ್ತುತ ಎದುರಾಗಿರುವ ಬರ ಪರಿಸ್ಥಿತಿಯಿಂದಾಗಿ ರೈತರಿಗೆ ಉಂಟಾಗಿರುವ ಆರ್ಥಿಕ ಹೊರೆಯನ್ನು ತಗ್ಗಿಸುವ ಉದ್ದೇಶದಿಂದ ಕರ್ನಾಟಕ ಹಾಲು ಮಹಾಮಂಡಳಿ (KMF) ನೀಡಿರುವ ಬೆಲೆ ಏರಿಕೆಯ ಪ್ರಸ್ತಾವನೆಗೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಮ್ಮತಿ ಸೂಚಿಸಿದ್ದಾರೆ.
ಹೀಗೆ ದರ ಹೆಚ್ಚಳದಿಂದ ಸಂಗ್ರಹವಾಗುವ ಮೊತ್ತದ ಶೇ.70ರಷ್ಟು ಭಾಗವನ್ನು ಹಾಲು ಉತ್ಪಾದಿಸುವ ರೈತರಿಗೆ ನೀಡಲು ಹಾಗೂ ಉಳಿದ ಶೇ.30ರಷ್ಟನ್ನು ಕೆಎಂಎಫ್ ಮತ್ತು ಹಾಲು ಒಕ್ಕೂಟಗಳ ನಿರ್ವಹಣೆಗೆ ಬಳಸಲು ಪ್ರಸ್ತಾವಿಸಲಾಗಿದೆ. ಸಂಪುಟ ಅನುಮೋದನೆ ದೊರೆತರೆ ಅಕ್ಟೋಬರ್ 2ರಿಂದಲೇ ಹೊಸ ದರ ಜಾರಿಗೆ ಬರುವ ಸಾಧ್ಯತೆಯಿದೆ



