Home latest ನಾಳೆ ಪ್ರಧಾನಿ ನರೇಂದ್ರ ಮೋದಿ ರಾಜ್ಯ ಭೇಟಿ ಹಿನ್ನೆಲೆ ; ಕಾಲೇಜುಗಳಿಗೆ ರಜೆ ಘೋಷಣೆ !!

ನಾಳೆ ಪ್ರಧಾನಿ ನರೇಂದ್ರ ಮೋದಿ ರಾಜ್ಯ ಭೇಟಿ ಹಿನ್ನೆಲೆ ; ಕಾಲೇಜುಗಳಿಗೆ ರಜೆ ಘೋಷಣೆ !!

Hindu neighbor gifts plot of land

Hindu neighbour gifts land to Muslim journalist

ಸೋಮವಾರ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಆಯ್ದ ಮಾರ್ಗಗಳ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಹೌದು. ನರೇಂದ್ರ ಮೋದಿ ಅವರು ಜೂನ್ 20 ರಂದು ನಗರಕ್ಕೆ ಆಗಮಿಸುತ್ತಿದ್ದಾರೆ. ಅನೇಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿರುವುದರಿಂದ ಅವರು ಸಂಚರಿಸಲಿರುವ ಮಾರ್ಗದಲ್ಲಿ ಬರುವ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಅಂದು ಬಿಗಿಭದ್ರತೆಯ ದೃಷ್ಟಿಯಿಂದ ರಜೆ ಘೋಷಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.

ಶನಿವಾರ ಈ ಬಗ್ಗೆ ಸರ್ಕಾರ ಆದೇಶ ಹೊರಡಿಸಿದೆ. ಇದರಂತೆ ಪ್ರಧಾನಿ ಹಾದು ಹೋಗಲಿರುವ ಐಐಎಸ್ಸಿ, ಗೊರಗುಂಟೆ ಪಾಳ್ಯ, ಸಿಎಂಟಿಐ, ವರ್ತುಲ ರಸ್ತೆ, ಡಾ.ರಾಜಕುಮಾರ್ ಸ್ಮಾರಕ ಮೇಲ್ಸೇತುವೆ, ಲಗ್ಗೆರೆ ಸೇತುವೆ, ನಾಯಂಡಹಳ್ಳಿ, ಮೈಸೂರು ರಸ್ತೆ ಆರ್.ವಿ.ಕಾಲೇಜು, ನಾಗರಬಾವಿ, ಸುಮನಹಳ್ಳಿ ಮೇಲ್ಸೇತುವೆ, ಎಂಇಐ ಜಂಕ್ಷನ್, ಗೋವರ್ಧನ್ ಚಿತ್ರಮಂದಿರ, ಯಶವಂತಪುರ ಮತ್ತು ಜಕ್ಕೂರು ವಿಮಾನ ನಿಲ್ದಾಣ ಮಾರ್ಗಗಳ ಸುತ್ತಮುತ್ತಲಿನ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಈ ರಜೆ ಅನ್ವಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.