ಶನಿವಾರ, 24 ಅಕ್ಟೋಬರ್ 2026

NEET: ಇಂದು ನೀಟ್ ಪರೀಕ್ಷೆ; ರಾಜ್ಯದ 381 ಕೇಂದ್ರಗಳು ಸಜ್ಜು

NEET 2025: 2025-26ನೇ ಸಾಲಿನ ವೈದ್ಯಕೀಯ, ದಂತ ವೈದ್ಯಕೀಯ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ಭಾನುವಾರ 'ನೀಟ್-ಯುಜಿ' ಪರೀಕ್ಷೆ ನಡೆಯಲಿದೆ.

NEET Exam
Image source: Ziapy

NEET 2025: 2025-26ನೇ ಸಾಲಿನ ವೈದ್ಯಕೀಯ, ದಂತ ವೈದ್ಯಕೀಯ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ ಭಾನುವಾರ ‘ನೀಟ್-ಯುಜಿ’ ಪರೀಕ್ಷೆ ನಡೆಯಲಿದೆ. ರಾಜ್ಯದ 381 ಪರೀಕ್ಷಾ ಕೇಂದ್ರಗಳಲ್ಲಿ 1.49 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ.

ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿಯನ್ನು ಕಡ್ಡಾಯಗೊಳಿಸಲಾಗಿದೆ. ವಸ್ತ್ರಸಂಹಿತೆ ಅನುಸಾರ ಪೂರ್ಣ ತೋಳಿರುವ ಮೇಲಂಗಿ, ದೊಡ್ಡ ಬಟನ್‌ ಗಳಿರುವ ಶರ್ಟ್/ಪ್ಯಾಂಟ್/ಶೂ/ ಸಾಕ್ಸ್ / ಎತ್ತರದ ಚಪ್ಪಲಿಗಳು/ ಕಿವಿಯೋಲೆ/ಬಳೆ/ಸರ/ಕಾಲೆಜ್ಜೆ/ಮೂಗುತಿ/ಜಡೆ ಕ್ಲಿಪ್ ಹಾಗೂ ಇತರ ಯಾವುದೇ ಮೆಟಲ್ ಉಪಕರಣಗಳನ್ನು ಧರಿಸುವಂತಿಲ್ಲ.

ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣಗಳನ್ನು ಪರೀಕ್ಷಾ ಕೊಠಡಿಗೆ ತರುವಂತಿಲ್ಲ ಎಂದು ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ(ಎನ್‌ಟಿಎ) ಸೂಚಿಸಿದೆ.

ಮಧ್ಯಾಹ್ನ 2ರಿಂದ ಸಂಜೆ 5ರವರೆಗೆ ಪರೀಕ್ಷೆ ನಡೆಯಲಿದೆ. ತಪಾಸಣೆ ಹಾಗೂ ನೋಂದಣಿ ದೃಷ್ಟಿಯಿಂದ ಮಧ್ಯಾಹ್ನ 1.30ರೊಳಗೆ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು. ಪ್ರವೇಶಪತ್ರದ ಜೊತೆಗೆ ಕಾಲೇಜಿನ ಗುರುತಿನ ಚೀಟಿ ಅಥವಾ ಆಧಾರ್ ಕಾರ್ಡ್/ಪ್ಯಾನ್ ಕಾರ್ಡ್ ಸೇರಿದಂತೆ ಯಾವುದಾದರೊಂದು ಮಾನ್ಯತೆ ಇರುವ ಗುರುತಿನ ಚೀಟಿ ಮತ್ತು ಎರಡು ಪಾಸ್‌ಪೋರ್ಟ್ ಅಳತೆಯ ಫೋಟೋಗಳೊಂದಿಗೆ ಹಾಜರಾಗುವಂತೆ ಸೂಚಿಸಿದೆ.

ಶೋಧನಾ ಉಪಕರಣ ಮತ್ತು ಜಾಮರ್ ಅಳವಡಿಸಲು ಎನ್‌ಟಿಎಯಿಂದ ಏಜೆನ್ಸಿಯವರನ್ನು ನಿಯೋಜಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿಯಲ್ಲಿರದೆ. ನಿಯೋಜಿತ ಅಧಿ ಕಾರಿ/ಸಿಬ್ಬಂದಿ ಹೊರತುಪಡಿಸಿ, ಇತರೆ ಯಾವುದೇ ಸಾರ್ವಜನಿಕರಿಗೆ ಪ್ರವೇಶವಿರುವುದಿಲ್ಲ. ರಾಜ್ಯದಲ್ಲಿ ಪರೀಕ್ಷೆ ಸುಸೂತ್ರವಾಗಿ ನಡೆಸಲು ಎಲ್ಲ ರೀತಿಯ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.