Physiotherapy Course: ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು ಫಿಸಿಯೋಥೆರಪಿ ಕೋರ್ಸ್ ಪ್ರವೇಶಕ್ಕೆ ನೀಟ್ ಪರೀಕ್ಷೆ ಕಡ್ಡಾಯ ಎಂದು ತಿಳಿಸಿದ್ದಾರೆ. ಕೋರ್ಸ್ ಅವಧಿಯನ್ನು ಐದು ವರ್ಷಗಳಿಗೆ ವಿಸ್ತರಿಸಲಾಗಿದೆ. ಈ ಮೂಲಕ ವಿದ್ಯಾರ್ಥಿಗಳು ಚಿಕಿತ್ಸಾ ಕ್ರಮವನ್ನು ಆಳವಾಗಿ ಅರಿಯಲು ಸಾಧ್ಯವಾಗುತ್ತದೆ ಎಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಶುಕ್ರವಾರ ಪ್ರಾರಂಭವಾದ ʼಕರ್ನಾಟಕ ಫಿಸಿಯೋಕಾನ್-2025′ ಉದ್ಘಾಟನಾ ಸಮಾರಂಭದಲ್ಲಿ ಹೇಳಿದರು.
Sponsoredನಗರದಲ್ಲಿ ಕರ್ನಾಟಕ ರಾಜ್ಯ ಅಲೈಡ್ ಹೆಲ್ತ್ ಸೈನ್ಸ್ ಕೌನ್ಸಿಲ್ (ಕೆಎಸ್ಎಎಚ್‌ಸಿ) ಹೊಸ ಕಚೇರಿಯನ್ನು ಆರಂಭಿಸಲಾಗಿದೆ. ಈ ವರ್ಷ ಅಲೈಡ್ ಸೈನ್ಸ್‌ನ 28 ಕಾಲೇಜುಗಳು ಆರಂಭಕ್ಕೆ ಅನುಮತಿ ನೀಡಲಾಗಿದೆ. ಫಿಸಿಯೋಥೆರಪಿ ಕೋರ್ಸ್ ಆರಂಭಕ್ಕೆ ಅನುಮತಿ ನೀಡುವ ಕುರಿತು ಪರಿಶೀಲಿಸಲಾಗುತ್ತದೆ. ವೃತ್ತಿಪರರಿಂದ ಗುಣಮಟ್ಟದ ಮತ್ತು ನಿಖರವಾದ ಫಿಸಿಯೋಥೆರಪಿ ಸೇವೆ ಸಿಗುತ್ತದೆ. ಅಲ್ಲದೇ, ನಕಲಿ ಫಿಸಿಯೋಥೆರಪಿಸ್ಟ್‌ಗಳನ್ನು ಪತ್ತೆ ಮಾಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
Marriage AdSponsored



