ನೀಟ್ ಯುಜಿ ಪರೀಕ್ಷೆಯಲ್ಲಿ ಅಕ್ರಮಗಳ ಕುರಿತು ದೆಹಲಿಯಲ್ಲಿ ಕಾಕ್ರೋಚ್ ಜನತಾ ಪಕ್ಷ(ಸಿಜೆಪಿ) ಪ್ರತಿಭಟನೆ ಮುಂದುವರಿಸುತ್ತಿದ್ದಂತೆ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್.ಟಿ.ಎ.) ತನ್ನ 47 ಅಧಿಕಾರಿಗಳನ್ನು ವಜಾಗೊಳಿಸಿದೆ
Sponsoredಹೌದು, ಕೇಂದ್ರ ಸರ್ಕಾರವು NTA ಯಿಂದ ಕನಿಷ್ಠ 47 ಜನರನ್ನು ತೆಗೆದುಹಾಕಲಾಗಿದೆ. ಅವರಲ್ಲಿ ಕೆಲವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ. ಆದರೆ ಅವರ ಪಾತ್ರಗಳು ಅಥವಾ ಹುದ್ದೆಗಳ ಬಗ್ಗೆ ವಿವರಗಳನ್ನು ನೀಡಿಲ್ಲ.
ಇನ್ನೂ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ವ್ಯಾಪಕ ಪ್ರತಿಭಟನೆ ವ್ಯಕ್ತವಾದ ಬೆನ್ನಲ್ಲೇ, ಮುಂದಿನ ತಿಂಗಳಲ್ಲಿ ಸರ್ಕಾರವು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ)ಯನ್ನು ಸಂಪೂರ್ಣವಾಗಿ ಆಧುನೀಕರಿಸಲಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ. ನೀಟ್-ಯುಜಿ, ಜೆಇಇ ಮೇನ್ (JEE Main) ಹಾಗೂ ಸಿಯುಇಟಿ (CUET) ಸೇರಿದಂತೆ ದೇಶದ 15 ರಿಂದ 20 ಪ್ರಮುಖ ರಾಷ್ಟ್ರೀಯ ಮಟ್ಟದ ಪರೀಕ್ಷೆಗಳನ್ನು ನಡೆಸುವ ಎನ್ಟಿಎ, ಭಾರತದ ಅತಿ ದೊಡ್ಡ ಪರೀಕ್ಷಾ ಸಂಸ್ಥೆಗಳಲ್ಲಿ ಒಂದಾಗಿದೆ. ಸಂಸ್ಥೆಯ ವಿಶ್ವಾಸಾರ್ಹತೆಯನ್ನು ಮರುಸ್ಥಾಪಿಸಲು ಮುಂದಿನ ಒಂದು ತಿಂಗಳಿನಲ್ಲಿ ಸಮಗ್ರ ವೈಫಲ್ಯ ತಡೆ ವ್ಯವಸ್ಥೆ ಜಾರಿಗೆ ತರಲು ಸರ್ಕಾರ ಯೋಜನೆ ರೂಪಿಸಿದೆ.




