Home News ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳು

ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳು

Hindu neighbor gifts plot of land

Hindu neighbour gifts land to Muslim journalist

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಮಾಂತರ ಮಂಡಲದ ಮುಂದಿನ ಸಂಘಟನಾ ಅವಧಿಗೆ ಪ್ರಧಾನ ಕಾರ್ಯದರ್ಶಿಗಳಾಗಿ ಸುನೀಲ್‌ ದಡ್ಡು, ಲೋಕೇಶ್‌ ಚಾಕೋಟೆ, ನಗರ ಮಂಡಲದ ಮುಂದಿನ ಸಂಘಟನಾ ಅವಧಿಗೆ ಪ್ರಧಾನ ಕಾರ್ಯದರ್ಶಿಗಳಾಗಿ ಯುವರಾಜ್‌ ಪಿರಿಯತ್ತೋಡಿ ಹಾಗೂ ಶಶಿಧರ್‌ ನಾಯಕ್‌ ಇವರನ್ನು ಆಯ್ಕೆ ಮಾಡಿ ಆದೇಶ ಹೊರಡಿಸಲಾಗಿದೆ.

ಉಮೇಶ್‌ ಕೋಡಿಬೈಲು, ಅನಿಲ್‌ ತೆಂಕಿಲ, ಪ್ರಶಾಂತ್‌ ನೆಕ್ಕಿಲಾಡಿ, ನಾಗೇಶ್‌ ಅವರಿಗೆ ಗ್ರಾಮಾಂತರ ಮತ್ತು ಮಂಡಲದಲ್ಲಿ ಪ್ರಧಾನ ಕಾರ್ಯದರ್ಶಿ ಜವಾಬ್ದಾರಿಯನ್ನು ಕೊಡಲಾಗಿತ್ತು. ಆದರೆ ಅರುಣ್‌ ಪುತ್ತಿಲ ಅವರಿಗೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡದ ಕಾರಣ ಕೆಲ ತಿಂಗಳ ಹಿಂದೆಯಷ್ಟೇ ಈ ನಾಲ್ವರು ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿರುವ ಕುರಿತು ವರದಿಯಾಗಿದೆ.