ಶನಿವಾರ, 24 ಅಕ್ಟೋಬರ್ 2026

ಪಾಸ್‌ಪೋರ್ಟ್‌ ವೆರಿಫಿಕೇಶನ್‌ಗೆ ಹೊಸ ನಿಯಮ

Passport Seva portal

ಬೆಂಗಳೂರು: ಪಾಸ್‌ಪೋರ್ಟ್‌ ವೆರಿಫಿಕೇಶನ್‌ಗೆ ಸಿಲಿಕಾನ್‌ ಸಿಟಿಯಲ್ಲಿ ಡಿಜಿ ಮತ್ತು ಐಜಿಪಿ ಸೂಚನೆ ಮೇರೆಗೆ ಹೊಸ ನಿಯಮ ಜಾರಿಗೆ ತರಲಾಗಿದೆ.

ಪಾಸ್‌ಪೋರ್ಟ್‌ ಪರಿಶೀಲನೆ ವೇಳೆ ಬಾಡಿವೋರ್ನ್‌ ಕ್ಯಾಮೆರಾ ಕಡ್ಡಾಯವಾಗಿರಬೇಕು.
ಪಾಸ್‌ಪೋರ್ಟ್‌ ಅರ್ಜಿದಾರರನ್ನು ಪೊಲೀಸ್‌ ಠಾನೆಗೆ ಕರೆಸಬಾರದು.
ಬದಲಿಗೆ ಅಧಿಕಾರಿಗಳು ಅರ್ಜಿದಾರರು ನೀಡಿರುವ ವಿಳಾಸಕ್ಕೆ ಕಡ್ಡಾಯವಾಗಿ ಭೇಟಿ ನೀಡಿ, ನೆರೆಹೊರೆಯವರಿಂದ ಮಾಹಿತಿ ಸಂಗ್ರಹ ಮಾಡಬೇಕು.
ಅರ್ಜಿದಾರರ ವಿಳಾಸಕ್ಕೆ ಭೇಟಿ ನೀಡುವ ಕನಿಷ್ಠ 24 ಗಂಟೆಗಳ ಮೊದಲು ಎಸ್‌ಎಂಎಸ್‌ ಅಥವಾ ಕರೆ ಮಾಡಿ ಮಾಹಿತಿ ನೀಡಬೇಕು ಎಂದು ಪೊಲೀಸ್‌ ಆಯುಕ್ತ ಸೀಮಂತ್‌ ಕುಮಾರ್‌ ಸಿಂಗ್‌ ಅವರು ಹೊಸ ಮಾರ್ಗಸೂಚಿ ಕುರಿತು ಮಾಹಿತಿಯನ್ನು ನೀಡಿದ್ದಾರೆ.

ಅರ್ಜಿದಾರರಿಂದ ಯಾವುದೇ ರೀತಿಯ ಆಮಿಷ ಅಥವಾ ಲಂಚವನ್ನು ನಿರೀಕ್ಷಿಸಬಾರದು. ಜೊತೆಗೆ ಲಂಚದ ಉದ್ದೇಶದಿಂದ ಅರ್ಜಿದಾರರಿಗೆ ಕಿರುಕುಳ ನೀಡಬಾರದು. ಅರ್ಜಿದಾರರನ್ನು ವಿನಾಕಾರಣ ಅಲೆದಾಡಿಸುವುದು ಅಥವಾ ವರದಿ ನೀಡಲು ವಿಳಂಬ ಮಾಡಬಾರದು. ಪ್ರತಿಕೂಲ ವರದಿ ಸಲ್ಲಿಸುವ ಸಂದರ್ಭದಲ್ಲಿ ಅಧಿಕಾರಿಗಳು ಸೂಕ್ತ ಮತ್ತು ಸ್ಪಷ್ಟವಾದ ಪುರಾವೆಗಳನ್ನು ಹೊಂದಿರಬೇಕು. ಈ ಎಲ್ಲಾ ನಿಯಮಗಳು ಪಾಲನೆಯಾಗುತ್ತಿವೆಯೇ ಎಂದು ಡಿಸಿಪಿ ವಾರಕ್ಕೊಮ್ಮೆ ವರದಿ ಸಲ್ಲಿಸಬೇಕು ಎಂದಿದ್ದಾರೆ. ಒಂದು ವೇಳೆ ನಿಯಮ ಉಲ್ಲಂಘಿಸುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಖಡಕ್ ಎಚ್ಚರಿಕೆ ನೀಡಿದ್ದಾರೆ.