Home Education Education Board : ರಾಜ್ಯದ ಎಲ್ಲಾ ಶಾಲಾ ಶಿಕ್ಷಕರಿಗೆ ಹೊಸ ರೂಲ್ಸ್ – ಇಲಾಖೆಯಿಂದ ಖಡಕ್...

Education Board : ರಾಜ್ಯದ ಎಲ್ಲಾ ಶಾಲಾ ಶಿಕ್ಷಕರಿಗೆ ಹೊಸ ರೂಲ್ಸ್ – ಇಲಾಖೆಯಿಂದ ಖಡಕ್ ಆದೇಶ !!

Education Board

Hindu neighbor gifts plot of land

Hindu neighbour gifts land to Muslim journalist

Education Board : ರಾಜ್ಯದ ಎಲ್ಲಾ ಶಾಲಾ ಶಿಕ್ಷಕರಿಗೆ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆಯು(Education Board)ಹೊಸ ರೂಲ್ಸ್ ಜಾರಿಮಾಡಿದ್ದು, ಇನ್ಮುಂದೆ ಶಾಲೆಯ ಶಿಕ್ಷಕರು ನಿಗದಿತ ಅವಧಿಗಿಂತ ಅರ್ಧ ಗಂಟೆ ಮೊದಲೇ ಶಾಲೆಗೆ ಹಾಜರಾಗಬೇಕೆಂದು ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ: Political News: ಬಿಜೆಪಿಗೆ ಬಾಕಿ ಉಳಿಸಿಕೊಂಡಿರುವ ಈ 5 ಕ್ಷೇತ್ರಗಳು ಇದೀಗ ಮಗ್ಗಲ ಮುಳ್ಳಾಗಿ ಬಿಜೆಪಿಗೆ ಚುಚ್ಚುತ್ತಿವೆ

ಹೌದು, ಸರ್ಕಾರಿ ಶಾಲೆಗಳಲ್ಲಿ(Government Schoo) ಪಠ್ಯ ಬೋಧನೆ ಮತ್ತು ಮಕ್ಕಳ ಕಲಿಕಾ ಗುಣ ಮಟ್ಟ ಬಲವರ್ಧನೆಗೊಳಿಸುವ ಸಲುವಾಗಿ ಶಿಕ್ಷಕರು ನಿಗದಿತ ಅವಧಿಗಿಂತ ಅರ್ಧ ಗಂಟೆ ಮೊದಲೇ ಶಾಲೆಗೆ ಹಾಜರಾಗಿ ಅಗತ್ಯ ಪೂರ್ವಸಿದ್ದತೆಗಳನ್ನು ಮಾಡಿಕೊಳ್ಳ ಬೇಕು ಎಂದು ಶಿಕ್ಷಣ ಇಲಾಖೆ ಸೂಚಿಸಿದೆ.

ಇದನ್ನೂ ಓದಿ: JC Madhuswamy: ತುಮಕೂರಿನಲ್ಲಿ ಹೊರಗಡೆಯಿಂದ ಬಂದು ಗೆದ್ದವರಿಲ್ಲ : ಮಾಜಿ ಸಚಿವ ಜೆ ಸಿ ಮಾಧುಸ್ವಾಮಿ

ಅಂದಹಾಗೆ ಮಕ್ಕಳ ಶೈಕ್ಷಣಿಕ, ಬೌದ್ಧಿಕ ಹಾಗೂ ಸಾಮಾಜಿಕಬೆಳೆವಣಿಗೆ ದೃಷ್ಟಿಯಿಂದ ಶಿಕ್ಷಕರುತಮ್ಮ ಕರ್ತವ್ಯವನ್ನು ಸಮರ್ಪಕವಾಗಿ ನಿಭಾಯಿಸಬೇಕು. ಪ್ರತಿ ಶಾಲೆಯಲ್ಲಿ ಮುಖ್ಯ ಶಿಕ್ಷಕರು, ಇತರೆ ಸಹ ಶಿಕ್ಷಕರು ನಿಗ ದಿತ ಸಮಯಕ್ಕೆ ಅರ್ಧಗಂಟೆ ಮೊದಲೇ ಕರ್ತವ್ಯಕ್ಕೆ ಹಾಜರಾಗಿ ಇಲಾಖಾ ಮಾರ್ಗ ಸೂಚಿಗಳನ್ನು ಅನುಸರಿಸಬೇಕು ಎಂದು ಸೂಚಿಸಲಾಗಿದೆ.

ಇಷ್ಟೇ ಅಲ್ಲದೆ ರಜೆಯ ಮೇಲೆ ತೆರಳುವಾಗ, ಶಾಲೆಗೆ ಹಾಜ ರಾಗಿದ್ದ ವೇಳೆ ಅನ್ಯ ಕಾರ್ಯನಿಮಿತ್ತ ಹೊರೆಗೆ ಹೋಗುವುದಾದರೆ ಕ್ಷೇತ್ರ ಶಿಕ್ಷಣಾಧಿ ಕಾರಿಗಳಿಂದ ಪೂರ್ವಾನುಮತಿ ಪಡೆದಿರಬೇಕು. ಶಿಕ್ಷಕರು ಶಾಲಾ ಅವಧಿಯಲ್ಲಿ ಬಿಇಒ, ಡಿಡಿಪಿಐ ಕಚೇರಿಗಳಿಗೆ ತೆರಳುವುದನ್ನು ಕಡ್ಡಾಯವಾಗಿ ನಿಯಂತ್ರಿಸಬೇಕು ಎಂದು ಇಲಾಖಾ ಆಯುಕ್ತ ಬಿ.ಬಿ.ಕಾವೇರಿ ಸುತ್ತೋಲೆ ಹೊರಡಿಸಿದ್ದಾರೆ.