ಪ್ರೀತಿಸಿ ಮದುವೆಯಾದ 4 ತಿಂಗಳಿಗೆ ನವವಿವಾಹಿತೆ ನೇಣಿಗೆ ಶರಣು
ಸಿಲಿಕಾನ್ ಸಿಟಿಯಲ್ಲಿ ಮದುವೆಯಾಗಿ ಕೇವಲ ನಾಲ್ಕು ತಿಂಗಳಾಗಿದ್ದ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Sponsoredಚಿಕ್ಕಮಗಳೂರು ಮೂಲದ ಶ್ವೇತಾ (25) ಮೃತಪಟ್ಟ ದುರ್ದೈವಿ. ಇವರು ಬೆಂಗಳೂರಿನ ಕಾಮಾಕ್ಷಿಪಾಳ್ಯ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
ಶ್ವೇತಾ ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಪ್ರೀತಿಸಿದ ಯುವಕನ ಜೊತೆ ಮದುವೆಯಾಗಿದ್ದರು. ಆದರೆ, ವೈವಾಹಿಕ ಜೀವನ ಆರಂಭವಾದ ಕೆಲವೇ ತಿಂಗಳುಗಳಲ್ಲಿ ಈ ಘಟನೆ ನಡೆದಿದೆ. ಆತ್ಮಹತ್ಯೆಗೂ ಮುನ್ನ ಶ್ವೇತಾ ಅವರು ಡೆತ್‌ನೋಟ್ ಬರೆದಿಟ್ಟಿದ್ದಾರೆ ಎನ್ನಲಾಗಿದ್ದು, ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಆತ್ಮಹತ್ಯೆಗೆ ನಿಖರವಾದ ಕಾರಣ ಏನೆಂಬುದು ಇನ್ನು ತಿಳಿದುಬಂದಿಲ್ಲ. ತನಿಖೆಯ ನಂತರವಷ್ಟೇ ಹೆಚ್ಚಿನ ಮಾಹಿತಿ ಹೊರಬರಬೇಕಿದೆ. ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.




