Home Interesting ವಾಹನದ ನಂಬರ್ ಪ್ಲೇಟ್ ಮೇಲೆ ಹೆಸರು, ಲಾಂಛನ, ಚಿಹ್ನೆಗಳಿಗೆ ಬ್ರೇಕ್ | ರಾಜ್ಯ ಸರಕಾರ ಖಡಕ್...

ವಾಹನದ ನಂಬರ್ ಪ್ಲೇಟ್ ಮೇಲೆ ಹೆಸರು, ಲಾಂಛನ, ಚಿಹ್ನೆಗಳಿಗೆ ಬ್ರೇಕ್ | ರಾಜ್ಯ ಸರಕಾರ ಖಡಕ್ ಸೂಚನೆ

Hindu neighbor gifts plot of land

Hindu neighbour gifts land to Muslim journalist

ವಾಹನದ ನಂಬರ್‌ಪ್ಲೇಟ್ ಮೇಲೆ ನಿಯಮಬಾಹಿರವಾಗಿ ಪ್ರದರ್ಶಿಸುವ ಯಾವುದೇ ಹೆಸರು, ಹುದ್ದೆಯ ನಾಮಫಲಕ ಹಾಕುವಂತಿಲ್ಲ. ಇಂತಹ ಫಲಕ ತೆರವು ಗೊಳಿಸದಿದ್ರೆ ಅಂತಹ ವಾಹನ ಮಾಲೀಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಆದೇಶ‌ ಹೊರಡಿಸಿದ್ದಾರೆ.

ಕಾರಿನ ನಂಬರ್‌ಪ್ಲೇಟ್ ಮೇಲೆ ಅಧ್ಯಕ್ಷ, ಕಾರ್ಯದರ್ಶಿ, ಸಂಘಟನೆ ಹೆಸರು, ಸ್ಟಾರ್ ನಟರ ಹೆಸರು ಹಾಕಿದ್ದಲ್ಲಿ ಪ್ರಕರಣ ದಾಖಲಿಸಲಾಗುತ್ತದೆ. ಈ ಸಂಬಂಧ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಯಿಂದಲೇ ಆದೇಶ ಹೊರಡಿಸಲಾಗಿದ್ದು, ಇದೇ ತಿಂಗಳ ಮೇ 24ರೊಳಗೆ ಎಲ್ಲಾ ನಾಮಫಲಕ ತೆರವು ಮಾಡಿ ವಾಹನವನ್ನು ರಸ್ತೆಗಿಳಿಸಬೇಕು. ಯಾವುದೇ ಖಾಸಗಿ ವಾಹನಗಳ ಮಾಲೀಕರುಗಳು ತಮ್ಮ ವಾಹನಗಳ ಮೇಲೆ ಸರ್ಕಾರಿ ಲಾಂಛನ ಅಥವಾ ಹೆಸರುಗಳನ್ನು ಅಳವಡಿಸಬೇಕಾದಲ್ಲಿ ಸರ್ಕಾರದಿಂದ ಅನುಮತಿ ಪಡೆದುಕೊಳ್ಳಬೇಕು ಎಂದು ಹೇಳಲಾಗಿದೆ.

ವಾಹನಗಳ ನೋಂದಣಿ ಫಲಕಗಳ ಮೇಲೆ ಅನಧಿಕೃತವಾಗಿ ರಾಷ್ಟ್ರೀಯ ಹಕ್ಕುಗಳ ಆಯೋಗ/ ರಾಜ್ಯ ಮಾನವ ಹಕ್ಕುಗಳ ಆಯೋಗಗಳ ಹೆಸರುಗಳನ್ನು ಹೋಲುವಂತಹ ರಾಷ್ಟ್ರೀಯ ರಾಜ್ಯ ಮಾನವ ಹಕ್ಕುಗಳ ಒಕ್ಕೂಟ/ ಸಂಸ್ಥೆ ಇತ್ಯಾದಿ ಹೆಸರುಗಳನ್ನು, ಚಿಕ್ಕ ಲಾಂಛನಗಳನ್ನು ಹಾಗೂ ಸಂಘ-ಸಂಸ್ಥೆಗಳ ಹೆಸರು ಅಳವಡಿಸಿಕೊಂಡಿರುವುದನ್ನು ತೆರವುಗೊಳಿಸಲು ಸೂಚಿಸಿ ಆದೇಶಿಸಲಾಗಿದೆ.

ಈ ಕುರಿತಂತೆ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರು ಕರ್ನಾಟಕ ರಾಜ್ಯಪತ್ರದಲ್ಲಿ ಸುತ್ತೋಲೆ ಹೊರಡಿಸಿದ್ದು, ವಾಹನಗಳ ನೋಂದಣಿ ಸಂಖ್ಯಾ ಫಲಕಗಳನ್ನು ಕೇಂದ್ರ ಮೋಟಾರು ವಾಹನಗಳ ನಿಯಮದ ಮಾನದಂಡಗಳಿಗೆ ಅನುಗುಣವಾಗಿ ಅಳವಡಿಸಬೇಕಾಗಿರುತ್ತದೆ ಎಂದು ತಿಳಿಸಿದ್ದಾರೆ.