Home News Nirmala Seetaraman : ಬ್ಯಾಂಕುಗಳಲ್ಲಿನ್ನು ಸ್ಥಳೀಯ ಭಾಷಿಕರಿಗೆ ಉದ್ಯೋಗ – ನಿರ್ಮಲ ಸೀತಾರಾಮನ್ ಘೋಷಣೆ!!

Nirmala Seetaraman : ಬ್ಯಾಂಕುಗಳಲ್ಲಿನ್ನು ಸ್ಥಳೀಯ ಭಾಷಿಕರಿಗೆ ಉದ್ಯೋಗ – ನಿರ್ಮಲ ಸೀತಾರಾಮನ್ ಘೋಷಣೆ!!

Hindu neighbor gifts plot of land

Hindu neighbour gifts land to Muslim journalist

Nirmala Seetaraman: ರಾಜ್ಯದ ಬ್ಯಾಂಕುಗಳಲ್ಲಿ ಹಿಂದಿ ವಾಲಾಗಳು ಅಥವಾ ಉತ್ತರ ಭಾರತೀಯರೇ ಹೆಚ್ಚಾಗಿರುವ ಕಾರಣ ಹಳ್ಳಿಯ ಜನರು ಬ್ಯಾಂಕುಗಳಿಗೆ ಹೋದ ಸಂದರ್ಭದಲ್ಲಿ ಅವರೊಂದಿಗೆ ಹಿಂದಿ ಅಥವಾ ಇಂಗ್ಲಿಷ್ ನಲ್ಲಿ ವ್ಯವಹರಿಸಲು ತುಂಬಾ ತೊಡಕಾಗುತ್ತಿತ್ತು. ಕೆಲವೊಮ್ಮೆ ಪರಸ್ಪರ ಮಾತನಾಡುವುದು ತಿಳಿಯದೆ ಗಲಾಟೆಗೆ ಹೋಗಿದ್ದು ಉಂಟು. ಆದರೆ ಇನ್ನು ಮುಂದೆ ಈ ರೀತಿಯ ಸಮಸ್ಯೆಗೆ ತಿಲಾಂಜಲಿ ಹಾಡಲು ಸರ್ಕಾರ ಮುಂದಾಗಿದೆ.

ಹೌದು, ಬ್ಯಾಂಕುಗಳು ಸ್ಥಳೀಯ ಭಾಷೆ ಬಲ್ಲವರನ್ನು ನೇಮಕ ಮಾಡಿಕೊಳ್ಳಬೇಕು. ಅವರ ಸ್ಥಳೀಯ ಭಾಷಾ ಜ್ಞಾನದ ಆಧಾರದ ಮೇಲೆ ಅವರ ವೃತ್ತಿಪರತೆ ಅಳೆಯಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಈ ಸಂಬಂಧ ನೇಮಕಾತಿ ಮತ್ತು ಮಾನವ ಸಂಪನ್ಮೂಲ ನೀತಿಗಳಲ್ಲಿ ಬದಲಾವಣೆ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ.

12ನೇ ಎಸ್‌ಬಿಐ ಬ್ಯಾಂಕಿಂಗ್ ಮತ್ತು ಅರ್ಥಶಾಸ್ತ್ರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಸೀತಾರಾಮನ್‌, ‘ಪ್ರತಿಯೊಂದು ಶಾಖೆಯಲ್ಲಿ ನೇಮಿಸಲಾಗುವ ಎಲ್ಲಾ ಸಿಬ್ಬಂದಿಗೆ ಅಲ್ಲಿನ ಜನ ಮತ್ತು ಅವರಾಡುವ ಭಾಷೆಯನ್ನು ಅರ್ಥೈಸಿಕೊಳ್ಳುವ ಸಾಮರ್ಥ್ಯ ಇರಬೇಕು. ಬ್ಯಾಂಕಿನ ಹಿರಿಯ ಅಧಿಕಾರಿಗಳಿಗೆ ಸ್ಥಳೀಯ ಭಾಷೆ ಬರದಿದ್ದರೂ, ಶಾಖೆಯ ಮಟ್ಟದಲ್ಲಿ ಉನ್ನತ ಹುದ್ದೆಯಲ್ಲಿರುವವರು ಆ ರಾಜ್ಯದ ಭಾಷೆಯನ್ನು ಅರಿತಿರುವುದು ಕಡ್ಡಾಯ. ಇದೇ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಬೇಕು’ ಎಂದರು.