Home News Nitin Nabin: ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ

Nitin Nabin: ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ ಸ್ವೀಕಾರ

Hindu neighbor gifts plot of land

Hindu neighbour gifts land to Muslim journalist

Nitin Nabin: ಬಿಜೆಪಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ (Nitin Nabin) ಅವರಿಂದು ಅಧಿಕಾರ ಸ್ವೀಕರಿಸಿದ್ದಾರೆ. 1980ರಲ್ಲಿ ಸ್ಥಾಪನೆಯಾದ ಬಿಜೆಪಿಯ 12ನೇ ರಾಷ್ಟ್ರೀಯ ಅಧ್ಯಕ್ಷರಾಗಿ (BJP president) ನಬಿನ್‌ ಅವರು ಅಧಿಕಾರ ವಹಿಸಿಕೊಂಡಿದ್ದು, 45 ನೇ ವಯಸ್ಸಿಗೆ ಪಕ್ಷ ಮುನ್ನಡೆಸುವ ಜವಾಬ್ದಾರಿ ಹೊತ್ತಿದ್ದಾರೆ.

ಕೇಂದ್ರ ಸಚಿವರೂ ಆಗಿರುವ ಜೆ.ಪಿ ನಡ್ಡಾ (JP Nadda) ಅವರ ಅಧಿಕಾರ ಅವಧಿ ಪೂರ್ಣಗೊಂಡ ಬೆನ್ನಲ್ಲೇ ಪಕ್ಷ ನಡೆಸಿದ ಚುನಾವಣೆಯಲ್ಲಿ ನಿತಿನ್ ಅವರು ಅವಿರೋಧವಾಗಿ ಆಯ್ಕೆಯಾದರು. 

ಬಿಜೆಪಿ ಸಾಂಸ್ಥಿಕ ಚುನಾವಣೆಯ ಚುನಾವಣಾಧಿಕಾರಿ ಕೆ. ಲಕ್ಷ್ಮಣ್‌ ಅವರು ನಬಿನ್ ಅವರ ಆಯ್ಕೆಯನ್ನ ಘೋಷಿಸಿ, ಪ್ರಮಾಣಪತ್ರ ನೀಡಿದರು.

ಈ ಮೊದಲು ನಬಿನ್ ಅವರನ್ನ ಪಕ್ಷದ ಕಾರ್ಯಾಧ್ಯಕ್ಷರಾಗಿ ಬಿಜೆಪಿ ನೇಮಿಸಿತ್ತು. ನೂತನ ಹುದ್ದೆಗೆ ಸ್ಪರ್ಧೆಗೂ ಮೊದಲ ಅವರು ಬಿಹಾರ ಸರ್ಕಾರದಲ್ಲಿ ಕಾನೂನು ಮತ್ತು ನ್ಯಾಯ, ವಸತಿ ಖಾತೆ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.